ಅಂತ್ಯಕ್ರಿಯೆಗೆ ಕೆಲವೇ ನಿಮಿಷ ಮೊದಲು ಎದ್ದು ಕುಳಿತ ಕೊರೊನಾ ಸೋಂಕಿತೆ

ಮುಂಬೈ, ಮೇ 15: ಅಂತ್ಯಕ್ರಿಯೆಗೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಎದ್ದುಕುಳಿತಿರುವ ಘಟನೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದಿದೆ.

76 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಅಂತ್ಯ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಆಶ್ಚರ್ಯವೆಂಬಂತೆ ಅಂತ್ಯಸಂಸ್ಕಾರಕ್ಕೂ ಕೆಲವೇ ನಿಮಿಷಗಳಿರುವಾಗ ಎಚ್ಚರಗೊಂಡು ಎದ್ದು ಕುಳಿತಿದ್ದಾರೆ. ಶಕುಂತಲಾ ಗಾಯಕ್‌ವಾಡ್ ಅವರಿಗೆ ಕೆಲವೇ ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು.

 76-Year-Old Covid Positive Woman Declared Dead Wakes Up Minutes Before Cremation

ಬಾರಾಮತಿಗೆ ಕರೆದುಕೊಂಡು ಹೋದಾಗ ಅಲ್ಲಿ ಹಾಸಿಗೆಗಳ ಲಭ್ಯತೆ ಇರಲಿಲ್ಲ, ಕಾರಿನಲ್ಲಿಯೇ ಇರಿಸಿಕೊಳ್ಳಲಾಗಿತ್ತು. ಅವರು ಅಲ್ಲಿಯೇ ಕುಸಿದು ಬಿದ್ದಿದ್ದರು, ಕುಟುಂಬದವರು ಮಹಿಳೆ ಮೃತಪಟ್ಟಿದ್ದಾರೆಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.

ಕೆಲ ಸಮಯದ ನಂತರ ಮಹಿಳೆ ಕಣ್ಣು ತೆರೆದು ಅಳಲು ಶುರು ಮಾಡಿದ್ದಳು, ಇದರಿಂದ ಒಮ್ಮೆಲೆ ಆಶ್ಚರ್ಯ ಆಗಿತ್ತು, ಮುಂದಿನ ಚಿಕಿತ್ಸೆಗಾಗಿ ಮಹಿಳೆಯನ್ನು ಸಿಲ್ವರ್ ಜುಬ್ಲೀ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+