• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ 12326 ಕೊವಿಡ್-19 ಸೋಂಕಿತರು ಗುಣಮುಖ

|
Google Oneindia Kannada News

ಮುಂಬೈ, ಆಗಸ್ಟ್.04: ಕೊರೊನಾವೈರಸ್ ಸೋಂಕಿತ ಪ್ರಕರಣಕ್ಕಿಂತ ಮಹಾರಾಷ್ಟ್ರದಲ್ಲಿ ಗುಣಮುಖರ ಸಂಖ್ಯೆಯೇ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲೇ 12326 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಕೊಂಚ ನಿಯಂತ್ರಣಕ್ಕೆ ಬಂದಿದೆ. ಒಂದೇ ದಿನ 7760 ಮಂದಿಯಲ್ಲಿ ಕೊರೊನಾವೈರಸ್ ಸೋಂಕು ಪತ್ತೆಯಾಗಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಮುಂಬೈ ಅನ್‌ಲಾಕ್ ಮಾರ್ಗಸೂಚಿ; ಮಾಲ್ ಓಪನ್ಮುಂಬೈ ಅನ್‌ಲಾಕ್ ಮಾರ್ಗಸೂಚಿ; ಮಾಲ್ ಓಪನ್

ಮಹಾರಾಷ್ಟ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಇದುವರೆಗೂ 457956 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 299356 ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ನಿಂದ 300 ಮಂದಿ ಸಾವು:

ಕೊರೊನಾವೈರಸ್ ಸೋಂಕಿತರಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಬಗ್ಗೆ ನಿರಾಳರಾಗುವಂತೆಯೂ ಇಲ್ಲ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 300 ಮಂದಿ ಮಹಾಮಾರಿಯ ಸುಳಿಗೆ ಸಿಕ್ಕು ಉಸಿರು ಚೆಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ಇದುವರೆಗೂ 16142 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 142151 ಕೊರೊನಾವೈರಸ್ ಸೋಂಕಿತರನ್ನು ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

English summary
7760 New Coronavirus Cases Reported in Maharashtra Today, State Tally Rise to 457956.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X