ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2020ರ ಬಳಿಕ ಮಹಾರಾಷ್ಟ್ರದಲ್ಲಿ ಕಡಿಮೆ ಹೊಸ ಕೋವಿಡ್ ಪ್ರಕರಣ ಪತ್ತೆ!

|
Google Oneindia Kannada News

ಮುಂಬೈ, ಅಕ್ಟೋಬರ್ 25; ಮಹಾರಾಷ್ಟ್ರದಲ್ಲಿ 24 ಗಂಟೆಯಲ್ಲಿ 889 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯ ಒಟ್ಟು ಸೋಂಕಿತರ ಸಂಖ್ಯೆ 66,03,850. ದೇಶದಲ್ಲಿಯೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾದ ರಾಜ್ಯ ಮಹಾರಾಷ್ಟ್ರವಾಗಿದೆ.

ಕಳೆದ 24 ಗಂಟೆಯಲ್ಲಿ 889 ಹೊಸ ಪ್ರಕರಣ ದಾಖಲಾಗಿದ್ದು, 12 ಜನರು ಮೃತಪಟ್ಟಿದ್ದಾರೆ. 2020ರ ಬಳಿಕ ಮೊದಲ ಬಾರಿ ಮಹಾರಾಷ್ಟ್ರದಲ್ಲಿ ಅತಿ ಕಡಿಮೆ ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿರುವ ಸೂಚನೆ ಸಿಕ್ಕಿದೆ.

ಭಾರತದಲ್ಲಿ ಕೋವಿಡ್ 2ನೇ ಅಲೆಯಂತಹ ವಿನಾಶಕಾರಿ ಅಲೆಯ ಸಾಧ್ಯತೆ ಇಲ್ಲ: ತಜ್ಞರುಭಾರತದಲ್ಲಿ ಕೋವಿಡ್ 2ನೇ ಅಲೆಯಂತಹ ವಿನಾಶಕಾರಿ ಅಲೆಯ ಸಾಧ್ಯತೆ ಇಲ್ಲ: ತಜ್ಞರು

ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 66,03,850. ಇದುವರೆಗೂ ಮೃತಪಟ್ಟವರು 1,40,028. ಒಟ್ಟು ಮೃತಪಟ್ಟವರು 64,37,025. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 23,184 ಆಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಹೇಳಿದೆ.

ಚೀನಾದಲ್ಲಿ ಮತ್ತೆ ಬಂತು ಕೋವಿಡ್; ವಿಮಾನ, ಶಾಲೆ ಬಂದ್ ಚೀನಾದಲ್ಲಿ ಮತ್ತೆ ಬಂತು ಕೋವಿಡ್; ವಿಮಾನ, ಶಾಲೆ ಬಂದ್

889 New Covid Cases In Maharashtra Lowest After March 2020

ಹೊಸ ಕೋವಿಡ್ ಪ್ರಕರಣಗಳು ಮಾತ್ರವಲ್ಲ, ಸಾವಿನ ಸಂಖ್ಯೆಯಲ್ಲೂ ಇಳಿಮುಖವಾಗಿದೆ. 24 ಗಂಟೆಯಲ್ಲಿ 12 ಜನರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಸಾವಿನ ಪ್ರಕರಣಗಳು ಥಾಣೆ, ಮುಂಬೈ, ಪುಣೆ, ರತ್ನಗಿರಿಯಲ್ಲಿ ಮಾತ್ರ ದಾಖಲಾಗಿದೆ.

ಕೋವಿಡ್ ಮೊದಲ ಅಲೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅತಿ ಕಡಿಮೆ ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಯಾವುದೇ ಕೋವಿಡ್ ಪ್ರಕರಣ ದಾಖಲಾಗಿಲ್ಲ. 12 ಜಿಲ್ಲೆಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 10ಕ್ಕಿಂತಲೂ ಕಡಿಮೆ ಇದೆ.

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ರಾಜ್ಯದಲ್ಲಿ 24 ಗಂಟೆಯಲ್ಲಿ 84,460 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಶೇ 18ರಷ್ಟು ಕಡಿಮೆ ಮಾಡಲಾಗಿದೆ. ರಾಜ್ಯದ ಪ್ರಸ್ತುತ ಪಾಸಿಟಿವಿಟಿ ದರ ಶೇ 1 ಆಗಿದೆ. ಇಂದು ರಾಜ್ಯದಲ್ಲಿ 1586 ಜನರು ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣ ದಾಖಲಾದ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅಕ್ಟೋಬರ್ 18ರಿಂದ ಜಾರಿಗೆ ಬರುವಂತೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲಾಗಿತ್ತು.

ರೆಸ್ಟೋರೆಂಟ್‌ಗಳು ಮಧ್ಯರಾತ್ರಿ ತನಕ ತೆರೆಯಲು ಅವಕಾಶ ನೀಡಲಾಗಿತ್ತು. ಅಂಗಡಿಗಳ ಕಾರ್ಯಾಚರಣೆ ಸಮಯವನ್ನು ಸಹ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಶುಕ್ರವಾರದಿಂದ ಅಮ್ಯೂಸ್‌ಮೆಂಟ್ ಪಾರ್ಕ್‌ ತೆರೆಯಲು ಸಹ ಅವಕಾಶ ನೀಡಲಾಗಿದೆ.

ದೇಶದಲ್ಲಿಯೂ ಕಡಿಮೆ; ಕೇಂದ್ರ ಆರೋಗ್ಯ ಸಚಿವಾಲಯದ ಸೋಮವಾರ ಬೆಳಗ್ಗೆಯ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 14,306 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದಲ್ಲಿಯೂ ಹೊಸ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ.

ದೇಶದ ಪ್ರತಿದಿನದ ಪಾಸಿಟಿವಿಟಿ ದರ 1.43 ಆಗಿದೆ. ವಾರದ ಪಾಸಿಟಿವಿಟಿ ದರ 1.24 ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಪ್ರಸ್ತುತ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 1,67,695. 239 ದಿನದಲ್ಲಿಯೇ ಇದು ಅತಿ ಕಡಿಮೆ ಸಕ್ರಿಯ ಪ್ರಕರಣವಾಗಿದೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ.

ಇದುವರೆಗೂ ದೇಶದಲ್ಲಿ ಗುಣಮುಖಗೊಂಡವರು 3,35,67,367 ಜನ. ಕಳೆದ 31 ದಿನಗಳಿಂದ ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರದ ಗಡಿ ದಾಟಿಲ್ಲ. 120 ದಿನಗಳಿಂದ 50 ಸಾವಿರದ ಗಡಿ ದಾಟಿಲ್ಲ ಎಂಬುದು ಸಂತಸದ ವಿಚಾರವಾಗಿದೆ.

ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಹೊಸ ಕೋವಿಡ್ ಪ್ರಕರಣ ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿ ದಾಖಲಾಗಿದೆ. ತಮಿಳುನಾಡಿನಲ್ಲಿ 24 ಗಂಟೆಯಲ್ಲಿ 1,112 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 12,791.

Recommended Video

Chahal ಅವರು ನಿನ್ನೆ ಪಂದ್ಯದಲ್ಲಿ ಇರಬೇಕಿತ್ತು ಎಂದ ಅಭಿಮಾನಿಗಳು | Oneindia Kannada

ಕೇರಳದಲ್ಲಿ 24 ಗಂಟೆಯಲ್ಲಿ 6,664 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. 9010 ಜನರು ಗುಣಮುಖಗೊಂಡಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 74,735 ಆಗಿದೆ.

English summary
Maharashtra reported only 889 new Covid 19 cases. Lowest daily case count since March 5, 2020. Total Covid tally rises to 66,03,850.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X