ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿತರಿಗಿಂತ ಗುಣಮುಖರೇ ಹೆಚ್ಚು!
ಮುಂಬೈ, ಆಗಸ್ಟ್.03: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಜೊತೆಗೆ ಮಹಾರಾಷ್ಟ್ರದಲ್ಲಿ ಗುಣಮುಖರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 10,221ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಹಾರಾಷ್ಟ್ರದಲ್ಲಿ ದಿಗಿಲು ಹುಟ್ಟಿಸಿದ್ದ ಕೊರೊನಾವೈರಸ್ ಹಾವಳಿ ಒಂದು ಮಗ್ಗಲಿನಲ್ಲಿ ಮುಂದುವರಿದಿದೆ. ಒಂದೇ ದಿನ ರಾಜ್ಯದಲ್ಲಿ 8968 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಮಹಾರಾಷ್ಟ್ರದಲ್ಲಿ ಇದುವರೆಗೂ 450196 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 287030 ಸೋಂಕಿತರು ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊವಿಡ್-19 ಮರಣ ಮೃದಂಗ:
ಕೊರೊನಾವೈರಸ್ ಸೋಂಕಿತರಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಬಗ್ಗೆ ನಿರಾಳರಾಗುವಂತೆಯೂ ಇಲ್ಲ. ಏಕೆಂದರೆ ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 266 ಮಂದಿ ಮಹಾಮಾರಿಯ ಸುಳಿಗೆ ಸಿಕ್ಕು ಉಸಿರು ಚೆಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ಇದುವರೆಗೂ 15842 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 147018 ಕೊರೊನಾವೈರಸ್ ಸೋಂಕಿತರನ್ನು ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಪುಣೆಯೊಂದರಲ್ಲೇ 41664 ಪ್ರಕರಣಗಳು ಇರುವುದು ಪತ್ತೆಯಾಗಿದೆ.












Click it and Unblock the Notifications