ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಳ್ಳೆ ಸುದ್ದಿ: 2 ಬಾರಿ ಕೊರೊನಾ ಗೆದ್ದ ಮಹಾರಾಷ್ಟ್ರದ 90 ವರ್ಷದ ವ್ಯಕ್ತಿ

|
Google Oneindia Kannada News

ಮುಂಬೈ, ಏಪ್ರಿಲ್ 24: ಮಹಾರಾಷ್ಟ್ರದ ಬೀಡ್ ಜಿಲ್ಲೆಯ 90 ವರ್ಷದ ವ್ಯಕ್ತಿ ಎರಡನೇ ಬಾರಿಗೆ ಕೊರೊನಾ ಸೋಂಕು ಗೆದ್ದಿದ್ದಾರೆ. ಇದರಿಂದ ಕೊರೊನಾ ಸೋಂಕನ್ನು ಯಾವ ವಯಸ್ಸಿನವರು ಬೇಕಾದರೂ ಸೋಲಿಸಬಹುದು ಎಂಬುದಕ್ಕೆ ಉದಾಹರಣೆಯಾದಂತಾಗಿದೆ.

ಈ ವೃದ್ಧ ವ್ಯಕ್ತಿ ಮೊದಲು 2020ರ ನವೆಂಬರ್‌ನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದರು. 10 ದಿನಗಳ ಕಾಲ ಕೇಜ್‌ನಲ್ಲಿ ಚಿಕಿತ್ಸೆ ಪಡೆದ ಬಳಿಕ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದರು.

ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆ

'ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಇಷ್ಟು ಪ್ರಮಾಣದಲ್ಲಿ ತೊಂದರೆಯಾಗಿರಲಿಲ್ಲ, ಆದರೆ ಎರಡನೇ ಬಾರಿಯ ಸೋಂಕಿನಿಂದ ಚೇತರಿಸಿಕೊಳ್ಳುವುದು ಅಷ್ಟು ಸುಲಭವಲ್ಲ' ಎಂದು ಹಿರಿಯ ವ್ಯಕ್ತಿ ಹೇಳಿದ್ದಾರೆ.

90-Year-Old From Maharashtras Beed Defeats COVID-19 Twice

ಏಪ್ರಿಲ್ ಮೊದಲ ವಾರದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗ ಲೋಖಂಡಿ ಸಾವರ್‌ಗಾವ್‌ನಲ್ಲಿರುವ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಿದ್ದರು. ಇದೀಗ ಐದು ದಿನಗಳ ಹಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಮೊದಲ ಬಾರಿಗೆ ಸೋಂಕಿಗೆ ತುತ್ತಾಗಿದ್ದಕ್ಕಿಂತ ಎರಡನೇ ಬಾರಿಗೆ ತುತ್ತಾದಾಗ ಸೋಂಕಿನ ತೀವ್ರತೆ ಹೆಚ್ಚಿತ್ತು ಎಂದು ಅವರ ಪುತ್ರ ತಿಳಿಸಿದ್ದಾರೆ.

ಭಾರತದಲ್ಲಿ ಸತತ ಮೂರನೇ ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,46,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು 1,66,10,481 ಕೊರೊನಾ ಸೋಂಕಿತರಿದ್ದಾರೆ, ಕಳೆದ 24 ಗಂಟೆಯಲ್ಲಿ 2624 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ 2,19,838 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
At a time when the COVID-19 figures in Maharashtra is witnessing an upward trend, a 90-year old man from Beed district has beaten the deadly infection twice and is living to tell the tale.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X