ಮಹಾರಾಷ್ಟ್ರದಲ್ಲಿ ಹೊಸದಾಗಿ 91 ಪೊಲೀಸರಿಗೆ ಕೊರೊನಾ, 26 ಮಂದಿ ಸಾವು

ಮುಂಬೈ, ಮೇ 31: ಮಹಾರಾಷ್ಟ್ರದಲ್ಲಿ ಕೊವಿಡ್ ವಿರುದ್ಧ ಹೋರಾಡುತ್ತಿರುವ ಪೊಲೀಸ್ ಇಲಾಖೆಯೇ ಕೊರೊನಾ ವೈರಸ್‌ಗೆ ತುತ್ತಾಗಿದೆ. ಇದುವರೆಗೂ 2 ಸಾವಿರಕ್ಕೂ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ.

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗೆ 91 ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ಅಂಟಿಕೊಂಡಿದೆ. ಈ ಮೂಲಕ ಮಹಾರಾಜ್ಯದಲ್ಲಿ 2416 ಜನ ಪೊಲೀಸರು ಮಹಾಮಾರಿಗೆ ತುತ್ತಾಗಿದ್ದಾರೆ. ಒಟ್ಟು 26 ಮಂದಿ ಪೊಲೀಸರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ 1421 ಜನರು ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಮಾರ್ಚ್ 22ನೇ ತಾರೀಕಿನಿಂದ ಮೇ 31ರವರೆಗಿನ ಲಾಕ್‌ಡೌನ್‌ನಿಂದ 1,20,150 ಕೇಸ್‌ಗಳು ದಾಖಲಾಗಿದೆ.

257 ಜನ ಪೊಲೀಸರು ಹಲ್ಲೆಗೊಳಗಾಗಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ 835 ಜನರನ್ನು ಬಂಧಿಸಲಾಗಿದೆ.

91 police persons tested positive for covid 19 in maharashtra

76,445 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಒಟ್ಟು 6 ಕೋಟಿ ದಂಡ ವಸೂಲಿ ಮಾಡಲಾಗಿದೆ. 65 ಜನ ಪೊಲೀಸರು ಗಾಯಕ್ಕೆ ಒಳಗಾಗಿದ್ದಾರೆ. 45 ಜನ ಆರೋಗ್ಯ ಸಿಬ್ಬಂದಿಗೆ ಹಲ್ಲೆಗೆ ಒಳಗಾಗಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+