ಕೊರೊನಾ ಕಾಟಕ್ಕೆ ಮಹಾರಾಷ್ಟ್ರದ ನಾಸಿಕ್ ಮತ್ತು ಥಾಣೆಯಲ್ಲಿ ಲಾಕ್ ಡೌನ್!

ಮುಂಬೈ, ಮಾರ್ಚ್.09: ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ 10 ಸಾವಿರಕ್ಕಿಂತ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 9927 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 22,38,398ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 56 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 52,556ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ 12182 ಕೊರೊನಾವೈರಸ್ ಸೋಂಕಿತರಿಗೆ ನೀಡಿರುವ ಚಿಕಿತ್ಸೆ ಯಶಸ್ವಿಯಾಗಿದೆ. ಈವರೆಗೂ ಮಹಾರಾಷ್ಟ್ರದಲ್ಲಿ 20,89,294 ಸೋಂಕಿತರು ಗುಣಮುಖರಾಗಿದ್ದಾರೆ. ಈ ನಡುವೆ ರಾಜ್ಯದಲ್ಲಿ 95,322 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

 9927 New Coronavirus Cases Reported in Maharashtra In Last 24 Hours

ಮಹಾರಾಷ್ಟ್ರದ ನಾಸಿಕ್ ಮತ್ತು ಥಾಣೆ ಲಾಕ್ ಡೌನ್:
ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನಾಸಿಕ್ ಮತ್ತು ಥಾಣೆಯಲ್ಲಿ ವಾರಾಂತ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಮಂಗಳವಾರದಿಂದಲೇ ಜಿಲ್ಲಾಡಳಿತ ಹೊರಡಿಸಿರುವ ಲಾಕ್ ಡೌನ್ ನಿಯಮಗಳು ಜಾರಿಗೆ ಬರಲಿವೆ. ಪ್ರಸ್ತುತ ಜಿಲ್ಲೆಯಲ್ಲಿ ಮದುವೆ ಹಾಗೂ ಸಮಾರಂಭ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ಆದರೆ ಮಾರ್ಚ್.15ರಿಂದ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
ಥಾಣೆಯಲ್ಲಿ 16 ಕೊರೊನಾವೈರಸ್ ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ. ಮಾರ್ಚ್.13ರಿಂದ ಮಾರ್ಚ್.31ರವರೆಗೂ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಜಿಲ್ಲಾಡಳಿತ ಘೋಷಿಸಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಥಾಣೆ ಪಾಲಿಕೆ ಆಯುಕ್ತ ವಿಪಿನ್ ಶರ್ಮಾ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+