ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಸಿಎಂ ಹುದ್ದೆಗೆ ಫಡ್ನವಿಸ್, ಠಾಕ್ರೆ ಬಿಟ್ಟು ಹೊಸ ಹೆಸರು!

|
Google Oneindia Kannada News

ಮುಂಬೈ, ನವೆಂಬರ್ 01: ಮುಖ್ಯಮಂತ್ರಿ ಹುದ್ದೆಗಾಗಿ ಶಿವಸೇನೆ ಮತ್ತು ಬಿಜೆಪಿ ನಡುವಿನ ಗುದ್ದಾಟ ನಡೆಯುತ್ತಿರುವ ಹೊತ್ತಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೊಸ ಹೆಸರೊಂದು ಕೇಳಿಬಂದಿದೆ.

ರೈತರೊಬ್ಬರು ತಮ್ಮನ್ನೇ ಮುಖ್ಯಮಂತ್ರಿ ಮಾಡಿ ಎಂದು ಗವರ್ನರ್ ಬಳಿ ಕೇಳಿದ ಘಟನೆ ಮಹಾರಾಷ್ಟ್ರದಲ್ಲಿಗುರುವಾರ ನಡೆದಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್: ಶಿವಸೇನೆ ನಾಯಕನಿಂದ ಪವಾರ್ ಭೇಟಿಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್: ಶಿವಸೇನೆ ನಾಯಕನಿಂದ ಪವಾರ್ ಭೇಟಿ

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ವಾಡ್ಮೌಲಿ ಎಂಬ ಹಳ್ಳಿಯ ರೈತ ಶ್ರೀಕಾಂತ್ ವಿಷ್ಣು ಗಡಲೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಶಿವಸೇನೆ ಮತ್ತು ಬಿಜೆಪಿ ನಡುವೆ ಮುಖ್ಯಮಂತ್ರಿ ಹುದ್ದೆ ಮತ್ತು ಸರ್ಕಾರ ರಚನೆಯ ಕುರಿತು ಒಮ್ಮತ ಮೂಡುವವರೆಗೂ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ನಾನೇ ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದಿದ್ದಾರೆ.

A Farmer From Maharashtra Requests Governor To Make Him Chief Minister

ಕಳೆದ ಅಕ್ಟೋಬರ್ 21 ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಅಕ್ಟೋಬರ್ 24 ರಂದು ಹೊರಬಿದ್ದಿದ್ದು, ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ನಂಬರ್ 145. ಆದರೆ ಬಿಜೆಪಿ ಏಕಾಂಗಿಯಾಗಿ ಈ ಸ್ಥಾನ ಪಡೆಯಲು ಅಶಕ್ತವಾಗಿದ್ದರಿಂದ ಶಿವಸೇನೆಯ ಬೆಂಬಲ ಬಿಜೆಪಿಗೆ ಅನಿವಾರ್ಯವಾಗಿದೆ. ಆದರೆ ಶಿವಸೇನೆ ಮುಖ್ಯಮಂತ್ರಿ ಹುದ್ದೆಯ ಬೇಡಿಕೆ ಇಟ್ಟಿದ್ದು, ಅದನ್ನು ನೀಡಲು ಬಿಜೆಪಿ ಸಿದ್ಧವಿಲ್ಲ. ಆದ್ದರಿಂದ ಸರ್ಕಾರ ರಚನೆ ವಿಳಂಬಾವುತ್ತಲೇ ಇದೆ.

English summary
A Farmer From Maharashtra Requests Governor To Make Him Chief Minister,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X