ಮುಂಬೈನ ಚೆಂಬೂರ್ ರೈಲ್ವೆ ನಿಲ್ದಾಣದ ಬಳಿ ಅಗ್ನಿ ಅವಘಡ
ಮುಂಬೈ, ಅಕ್ಟೋಬರ್ 01: ಮುಂಬೈನ ಚೆಂಬೂರು ರೈಲ್ವೆ ನಿಲ್ದಾಣದ ಸಮೀಪದ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಚೆಂಬೂರ್ ರೈಲ್ವೆ ನಿಲ್ದಾಣದ ಸಮೀಪವಿರುವ ಮಾರುಕಟ್ಟೆಯಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಸುದ್ದಿ ಬಂದ ನಂತರ, 10 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸ್ತಿದವು ಸುದೀರ್ಘ ಹೋರಾಟದ ನಂತರ ಬೆಂಕಿಯನ್ನು ಇದೀಗ ನಿಯಂತ್ರಿಸಲಾಗಿದೆ.

ಬೆಂಕಿ ನಂದಿಸಿದ ಬಳಿಕ ಕೂಲಿಂಗ್ ಕಾರ್ಯಾಚರಣೆ ನಡೆಯುತ್ತಿದ್ದು, ಈ ಅವಘಡಕ್ಕೆ ಸ್ಪಷ್ಟ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.













Click it and Unblock the Notifications