ಮಹಾರಾಷ್ಟ್ರದ ಸಾಂಗ್ಲಿ ಬಳಿ ಅಪಘಾತ, ಕರ್ನಾಟಕದ ಹತ್ತು ಕಾರ್ಮಿಕರ ಸಾವು

Posted By:
Subscribe to Oneindia Kannada

ಸಾಂಗ್ಲಿ, ಅಕ್ಟೋಬರ್ 21: ಮಹಾರಾಷ್ಟ್ರದ ಸಾಂಗ್ಲಿ ಬಳಿ ನಡೆದ ಭೀಕರ ಅಪಘಾತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಮೃತ ಪಟ್ಟವರು ಕಾರ್ಮಿಕರಾಗಿದ್ದು, ಕರ್ನಾಟಕದ ಬೆಳಗಾವಿಗೆ ಸೇರಿದವರು ಎಂದು ತಿಳಿದು ಬಂದಿದೆ.

ಬಳ್ಳಾರಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ನಾಲ್ವರು ದುರ್ಮರಣ

ಟೈಲ್ಸ್ ತುಂಬಿದ್ದ ಲಾರಿ ಉರುಳಿ ಘಟನೆ ಸಂಭವಿಸಿದ್ದು, ಲಾರಿಯಲ್ಲಿದ್ದ ಎಲ್ಲರೂ ಕಾರ್ಮಿಕರು. ಜೆಸಿಬಿ ಯಂತ್ರಗಳನ್ನು ಬಳಸಿ ಟೈಲ್ಸ್ ಗಳನ್ನು ಸ್ಥಳಾಂತರಿಸಿ, ಮೃತದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ.

Accident

ಬೆಳಗ್ಗೆ ಮಂಜು ಕವಿದಿದ್ದರಿಂದ ತಿರುವಿನಲ್ಲಿ ರಸ್ತೆ ಕಾಣದೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಹತ್ತು ಕಾರ್ಮಿಕರು ಮೃತಪಟ್ಟಿದ್ದು, ಇಪ್ಪತ್ತು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನವು ಕರಡ್ ನಿಂದ ಸೋಲಾಪುರಕ್ಕೆ ತೆರಳುತ್ತಿತ್ತು. ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಪೊಲೀಸರು ಸ್ಥಳಕ್ಕೆ ತೆರಳಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Accident in Sangli, Maharashtra. Karnataka's 10 worker dies in the accident. More information awaited.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ