ಹಲ್ಲೆ ಪ್ರಕರಣ: ಸೈಫ್ ಅಲಿ ಖಾನ್ ಮೇಲೆ ಚಾರ್ಚ್ ಶೀಟ್
ಮುಂಬೈ, ಮಾ.13: ಅನಿವಾಸಿ ಭಾರತೀಯರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೈಫ್ ಅಲಿಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಸೈಫ್ ಅಲಿಖಾನ್ ಸೇರಿದಂತೆ ಇಬ್ಬರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದೆ. 2012 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಚಾರ್ಜ್ ಶೀಟ್ ದಾಖಲಿಸಲಾಗಿದೆ.
ಬಾಲಿವುಡ್ ತಾರೆ ಕರೀನಾ ಕಪೂರ್ ಕೈಹಿಡಿಯುವುದಕ್ಕೂ ಮುನ್ನ ನವ ವಧು ಸೈಫ್ ಅಲಿ ಖಾನ್ ಅವರು ಮುಂಬೈನ ಹೋಟೆಲ್ ನಲ್ಲಿ ಉದ್ಯಮಿಯೊಬ್ಬರ ಮೇಲೆ ಕೈ ಮಾಡಿದ್ದರು. ತಾಜ್ ಹೋಟೆಲಿನ ವಸಾಬಿ ರೆಸ್ಟೋರೆಂಟ್ ನಲ್ಲಿ ರಾತ್ರಿ ಭೋಜನ ಕೂಟದಲ್ಲಿ ಸೈಫ್ ತಮ್ಮ ಭಾವಿ ಪತ್ನಿ ಕರೀನಾ ಜೊತೆ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿತ್ತು. ಹೋಟೆಲ್ ನಲ್ಲಿ ಏರು ಧ್ವನಿಯಲ್ಲಿ ಸೈಫ್ ಮಾತನಾಡುತ್ತಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದಕ್ಷಿಣ ಆಫ್ರಿಕಾ ಮೂಲದ ಉದ್ಯಮಿ ಇಕ್ಬಾಲ್ ಶರ್ಮಾ ಎಂಬ ಅನಿವಾಸಿ ಭಾರತೀಯ ಉದ್ಯಮಿ ವಿರುದ್ಧ ಮಾತಿನ ಚಕಮಕಿ ನಡೆದಿತ್ತು. ಮಾತಿಗೆ ಮಾತು ಬೆಳೆದು ಶರ್ಮಾ ಮುಖಕ್ಕೆ ಸೈಫ್ ಪಂಚ್ ಕೊಟ್ಟಿದ್ದ. ಈ ಘಟನೆಯಿಂದ ಶರ್ಮಾ ಗಾಯಗೊಂಡಿದ್ದರು. ಮೂಗಿನಿಂದಲೂ ರಕ್ತ ಸೋರಿತ್ತು. ಶರ್ಮಾ ಸ್ನೇಹಿತರು ಆತನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದರು.
ಈ ಸಂಬಂಧ ಅವರು ಸೈಫ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಒಂದು ದಿನ ಜೈಲು ವಾಸವನ್ನೂ ಅನುಭವಿಸಿದ್ದ ಸೈಫ್ ಜಾಮೀನ ಮೇಲೆ ಬಿಡುಗಡೆಯಾಗಿದ್ದರು. ಈ ಘಟನೆ ನಡೆದು ಎಂಟು ತಿಂಗಳು ಕಳೆದ ಮೇಲೆ ಪೊಲೀಸರು ಸೈಫ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದರು. ಈಗ ಮತ್ತೊಮ್ಮೆ ಪ್ರಕರಣಕ್ಕೆ ಜೀವ ಬಂದಿದೆ.
ಫೆ.22,2012ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಫ್ ಅಲಿ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 325, 34 ಅನ್ವಯ ಪ್ರಕರಣ ದಾಖಲಿಸಲಾಗಿದೆ. ಏ.30ರ ನಂತರ ಮತ್ತೆ ವಿಚಾರಣೆ ನಡೆಯಲಿದೆ. ರಕ್ಷಿತ ಅಭಯಾರಣ್ಯದಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ಜತೆ ಸೈಫ್ ಕೂಡಾ ಸಹ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ.











Click it and Unblock the Notifications