ಬಾಲಿವುಡ್ ನಟ ಸಂದೀಪ್ ನಹಾರ್ ಅತ್ಮಹತ್ಯೆ

ಮುಂಬೈ, ಫೆಬ್ರವರಿ.15: ಬಾಲಿವುಡ್ ನಟ ಸಂದೀಪ್ ನಹಾರ್ ಡೆತ್ ನೋಟ್ ಬರೆದಿಟ್ಟು ಮುಂಬೈನ ಗೊರೆಗಾವ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಆತ್ಮಹತ್ಯಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮುಂಬೈ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಸಾವಿಗೂ ಮೊದಲು ನೋವು ತೋಡಿಕೊಂಡ ನಟ ಸಂದೀಪ್ ನಹಾರ್ ತಮ್ಮ ವೈಯಕ್ತಿಕ ಸಮಸ್ಯೆಗಳು ಹಾಗೂ ಅವುಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಎಂಬುದರ ಬಗ್ಗೆ ತೋಚದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಎಂ.ಎಸ್. ಧೋನಿ ದಿ ಅನ್ ಟೋಲ್ಡ್ ಸ್ಟೋರಿ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ಜೊತೆಗೆ ಇದೇ ಸಂದೀಪ್ ನಹಾರ್ ಕೂಡಾ ನಟನೆ ಮಾಡಿದ್ದರು. ಕೇಸರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಸಂದೀಪ್ ನಹಾರ್ ಅಭಿನಯಿಸಿದ್ದರು.

 Actor Sandeep Nahar Dies Allegedly By Suicide At His Residence In Mumbais Goregaon Area

ಜೂನ್ ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ:

ಕಳೆದ 2020ರ ಜೂನ್ ತಿಂಗಳಿನಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೂಡಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಅವರ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದವು. ಈ ಹಿನ್ನೆಲೆ ಸುಶಾಂತ್ ಸಿಂಗ್ ರಜಪೂತ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+