ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ರಹಸ್ಯ ಫೋಟೋ: ಸಂಸದೆ ನವನೀತ್ ಕೌರ್ ರಾಣಾ ದೂರು
ಮುಂಬಯಿ, ಮೇ 11: ಅನಾರೋಗ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಸಂಪೂರ್ಣ ಬಾಡಿ ಸ್ಕ್ಯಾನ್ ಮಾಡಿಸಿಕೊಳ್ಳುವಾಗ ರಹಸ್ಯವಾಗಿ ತನ್ನ ಪೋಟೊ ತೆಗೆಯಲಾಗಿದೆ ಎಂದು ಆರೋಪಿಸಿ ನಟಿ, ಸಂಸದೆ ನವನೀತ್ ಕೌರ್ ರಾಣಾ ಮುಂಬಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಆಂಧ್ರ ಪ್ರದೇಶದ ಅಮರಾವತಿ ಕ್ಷೇತ್ರದ ಸಂಸದೆಯಾಗಿರುವ ನವನೀತ್ ಕೌರ್ ರಾಣಾ ಅವರು, ಈ ಹಿಂದೆ ತೆಲುಗು ಮತ್ತು ತಮಿಳು ಭಾಷೆಯ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ತಮಿಳು ನಟ ವಿಜಯಕಾಂತ್ ಅಭಿನಯದ 'ಅರಸಂಗಂ' ಮತ್ತು ಕರುಣಾ ಅಭಿನಯದ 'ಅಂಬಸಮುದ್ರಂ ಅಂಬನಿ' ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ.

ನವನೀತ್ ಕೌರ್ ರಾಣಾ ಅವರು ಅಮರಾವತಿ ನಗರದ ಬದ್ನೇರಾ ಕ್ಷೇತ್ರದ ಹಾಲಿ ಶಾಸಕ ರವಿ ರಾಣಾ ಅವರನ್ನು 2011ರಲ್ಲಿ ಮದುವೆಯಾದರು. ಇತ್ತೀಚೆಗೆ ವಿವಾದ ಒಂದಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿಕೆ ನೀಡಿದ್ದರು. ಮಹಾರಾಷ್ಟ್ರ ಪೊಲೀಸರು ನವನೀತ್ ಕೌರ್ ರಾಣಾ ದಂಪತಿಯನ್ನು ಬಂಧಿಸಿದ್ದರು. ಸದ್ಯ ಇಬ್ಬರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಕೆಲವು ದಿನಗಳ ಹಿಂದೆ ನವನೀತ್ ಕೌರ್ ರಾಣಾ ಅವರಿಗೆ ಎದೆ ನೋವು ಕಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆಯ ಭಾಗವಾಗಿ ಅವರನ್ನು ವೈದ್ಯರು ಸಂಪೂರ್ಣ ಬಾಡಿ ಸ್ಕ್ಯಾನ್‌ಗೆ ಒಳಪಡಿಸಿದ್ದಾರೆ. ಈ ವೇಳೆ ಸ್ಕ್ಯಾನ್ ಮಾಡುವ ಕೊಠಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ರಹಸ್ಯವಾಗಿ ಅವರ ಬಾಡಿ ಸ್ಕ್ಯಾನ್ ಪೋಟೊ ಸೆರೆಹಿಡಿದಿರುವ ವಿಚಾರ ತಿಳಿದುಬಂದಿದೆ.

ಇದರ ವಿರುದ್ಧಸಿಡಿಮಿಡಿಗೊಂಡಿರುವ ನವನೀತ್ ಕೌರ್ ರಾಣಾ, ಅಪರಿತ ವ್ಯಕ್ತಿಯ ವಿರುದ್ಧ ಮುಂಬಯಿ ಪೊಲೀಸರಿಗೆ ದೂರು ನೀಡಿದ್ದಾರೆ.
-
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Anusha Rai: ಬಿಗ್ಬಾಸ್ ಬೆಡಗಿ ಅನುಷಾ ರೈ ಮನೆಗೆ ಬಂತು ಐಷಾರಾಮಿ ಫಾರ್ಚೂನರ್ ಕಾರು, ಫೋಟೋಸ್ ಇಲ್ಲಿವೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications