ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19ನಿಂದ ಸಾವು: ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 18 ಮಂದಿಗೆ ಕೊರೊನಾ ಸೋಂಕು

|
Google Oneindia Kannada News

ಮುಂಬೈ, ಮೇ 31: ಕೊವಿಡ್ 19 ರೋಗದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ 18 ಮಂದಿಗೆ ಕೊರೊನಾವೈರಸ್ ಇರುವುದು ಪತ್ತೆಯಾಗಿದೆ.

ಮೃತದೇಹವನ್ನು ಓಪನ್ ಮಾಡದಂತೆ ನಿರ್ದಿಷ್ಟ ಸೂಚನೆಗಳನ್ನು ನೀಡಿಯೇ ಮಹಿಳೆಯ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು, ಆದರೆ ಅವರು ಮೇ 25 ರಂದು ಅಂತಿಮ ವಿಧಿಗಳನ್ನು ನಿರ್ವಹಿಸಲು ಸುತ್ತಿದ ದೇಹವನ್ನು ತೆರೆದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋವಿಡ್ - 19 ಸೋಂಕಿತರ ಸಾವು; ದಾಖಲೆ ಬರೆದ ಮಹಾರಾಷ್ಟ್ರಕೋವಿಡ್ - 19 ಸೋಂಕಿತರ ಸಾವು; ದಾಖಲೆ ಬರೆದ ಮಹಾರಾಷ್ಟ್ರ

ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ 70 ಮಂದಿಯನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಿದ್ದು, ಆ ಪೈಕಿ 18 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಅವರು ಹೇಳಿದ್ದಾರೆ.

After Attending Funeral Of COVI 19 Patient 18 Mourners Test Positive In Thane

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್‌ನಗರ ಪಟ್ಟಣದಲ್ಲಿ ಕೊರೋನಾ ವೈರಸ್ ಸೋಂಕಿತ 40 ವರ್ಷದ ಮಹಿಳೆ ಮೃತಪಟ್ಟಿದ್ದು, ನಿಷೇಧಾಜ್ಞೆಯನ್ನು ಉಲ್ಲಂಘಿಸಿ 70ಕ್ಕೂ ಹೆಚ್ಚು ಜನ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದಾರೆ ಎಂದು ಉಲ್ಲಾಸ್ ನಗರಪಾಲಿಕೆ ವಕ್ತಾರರು ಹೇಳಿದ್ದಾರೆ.

ಸಾಂಕ್ರಾಮಿಕ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮೃತ ಮಹಿಳೆಯ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

English summary
At least 18 mourners, who attended the funeral of a Covid-19 patient, have tested positive for the infection in Ulhasnagar town of Maharashtra's Thane district, a civic official said on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X