• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಖರ್ಜಿ ಆಯ್ತು, ಈಗ RSS ಕಾರ್ಯಕ್ರಮಕ್ಕೆ ರತನ್ ಟಾಟಾ ಅತಿಥಿ

|

ಮುಂಬೈ, ಜುಲೈ 10: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದ್ದರು.

ಇದೀಗ ಟಾಟಾ ಸನ್ಸ್ ಕಂಪನಿಯ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮುಂಬೈಯಲ್ಲಿ ಆಗಸ್ಟ್ 24 ರಂದು ನಡೆಯಲಿರುವ ಆರೆಸ್ಸೆಸ್ ನ ಎನ್ ಜಿಒ ವೊಂದರ ಕಾರ್ಯಕ್ರಮದಲ್ಲಿ ರತನ್ ಟಾಟಾ ಭಾಗವಹಿಸಲಿದ್ದಾರೆ.

ಆರೆಸ್ಸೆಸ್, ಪ್ರಣಬ್ ಮುಖರ್ಜಿ ಮತ್ತು ರಾಷ್ಟ್ರಭಕ್ತಿ ಸ್ಫುರಿಸುವ ಮಾತು

ಜೂನ್ ನಲ್ಲಿ ನಾಗ್ಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಕ್ರವೊಂದರಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ, ಮಾಜಿ ರಾಷ್ಟ್ರಪತಿಗಳ ನಡೆಗೆ ಕಾಂಗ್ರೆಸ್ ನಾಯಕರಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು. ಆದರೂ ಯಾರಿಗೂ ಕ್ಯಾರೇ ಎನ್ನದೆ ಮುಖರ್ಜಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅತ್ಯುತ್ತಮ ಭಾಷಣವನ್ನೂ ನೀಡಿದ್ದರು.

ಇದೀಗ ರತನ್ ಟಾಟಾ ಸಹ ಮೋಹನ್ ಭಾಗವತ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದು ಹಲವರ ಕಣ್ಣನ್ನು ಕೆಂಪಾಗಿಸಿದೆ.

English summary
After Congress leader Pranab Mukherjee shared stage with RSS(Rashtriya Swayamsevaka Sangh) chief Mohan Bhagwat, now former chairman of Tata Sons Ratan Tata to share stage with Mohan Bhagwat in Mumbai
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X