ನವಾಬ್ ಮಲಿಕ್ ಬಂಧನ: ಶರದ್ ಪವಾರ್‌ಗೆ ಕರೆ ಮಾಡಿದ ಮಮತಾ
ಹೊಸದಿಲ್ಲಿ, ಫೆಬ್ರವರಿ 23: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ನವಾಬ್ ಮಲಿಕ್ ಅವರನ್ನು ವಿಚಾರಣೆ ನಡೆಸಿದ ಬಳಿಕ ಇಡಿ ಬುಧವಾರ ಬಂಧಿಸಿದೆ. ಈ ಬಂಧನ ಮಹಾರಾಷ್ಟ್ರದ ರಾಜಕೀಯದಲ್ಲಿ ಕೋಲಹಲವನ್ನು ಸೃಷ್ಟಿಸಿದೆ. ನವಾಬ್ ಮಲಿಕ್ ಬಂಧನದ ನಂತರ ಎಲ್ಲಾ ಕಡೆಯಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಡಿ ಕ್ರಮಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಇದೀಗ ಈ ವಿಚಾರದಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕರೆ ಮಾಡಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಶರದ್ ಪವಾರ್ ಅವರಿಗೆ ಕರೆ ಮಾಡಿ ನವಾಬ್ ಮಲಿಕ್ ಬಂಧನವನ್ನು ಪ್ರತಿಭಟಿಸಿದ್ದಾರೆ. ಇದರಿಂದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸುವ ಮಾತು ಕೇಳಿಬರುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, ಪಕ್ಷ ವಿರೋಧಿಗಳ ವಿರುದ್ಧ ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಮತಾ ಶರದ್ ಪವಾರ್ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಸಿಲುಕಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದು ದೇಶದ ಒಕ್ಕೂಟ ರಚನೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.
ಮಹಾರಾಷ್ಟ್ರದ ರಾಜಕೀಯದಲ್ಲಿ ಬಿಸಿ ಮುಟ್ಟಿಸಿದ ನವಾಬ್ ಮಲಿಕ್ ಯಾರು, ಆಸ್ತಿ ಎಷ್ಟು?
ಇದಕ್ಕೂ ಮುನ್ನ ಮಾತನಾಡಿದ ಮಹಾರಾಷ್ಟ್ರ ಸಚಿವ ಅಶೋಕ್ ಚವಾಣ್, ರಾಜಕೀಯ ಇಷ್ಟು ಕೀಳು ಮಟ್ಟಕ್ಕೆ ಹೋಗಿದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಇದು ಅತ್ಯಂತ ನಿರಾಶಾದಾಯಕ ಸಂಗತಿ. ಇಡೀ ದೇಶದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಗೋಚರಿಸುತ್ತಿರುವುದು ನ್ಯಾಯಯುತವಾಗಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವುದು, ವಿರೋಧಿಸುವುದು, ತಮ್ಮದೇ ಆದ ಅಭಿಪ್ರಾಯಗಳನ್ನು ವಿಭಿನ್ನ ರೀತಿಯಲ್ಲಿ ಮುಂದಿಡುವುದು ಸಹ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಆದರೆ ಕೇಂದ್ರೀಯ ಸಂಸ್ಥೆಗಳು ನ್ಯಾಯಾಲಯಗಳನ್ನು ಬಿಟ್ಟು, ಪೊಲೀಸರನ್ನು ಬಿಟ್ಟು ತಮ್ಮದೇ ಆದ ಆಡಳಿತ ನಡೆಯುತ್ತಿರುವುದು ಖಂಡಿತ ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮಲಿಕ್ ಅವರು ಭೂಗತ ಜಗತ್ತಿನ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಮುಂಬೈ ಸ್ಫೋಟದ ಆರೋಪಿ ಮತ್ತು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸರ್ದಾರ್ ವಾಲಿ ಶಾ ಖಾನ್ ಇಬ್ಬರನ್ನು ಫಡ್ನವಿಸ್ ಹೆಸರಿಸಿದ್ದರು. ದಾವೂದ್ ಸಹೋದರಿ ಹಸೀನಾ ಪರ್ಕರ್ ಅವರ ಅಂಗರಕ್ಷಕರಾಗಿದ್ದ ಮೊಹಮ್ಮದ್ ಸಲೀಂ ಪಟೇಲ್ ಅವರ ಹೆಸರು ಬಹಿರಂಗಪಡಿಸಿದ್ದರು. ಹಸೀನಾಳ ಸಂಪೂರ್ಣ ಭೂಮಿ ಮೊಹಮ್ಮದ್ ಸಲೀಂ ಪಟೇಲ್ ಹೆಸರಿನಲ್ಲಿದೆ. ಮಲಿಕ್ ಈ ಇಬ್ಬರು ಆರೋಪಿಗಳಿಂದ ಕುರ್ಲಾ ಬಳಿ ಸುಮಾರು ಮೂರು ಎಕರೆ ಜಮೀನು ಖರೀದಿಸಿದ್ದು, ಅದಕ್ಕೆ ಅತ್ಯಂತ ಕಡಿಮೆ ಬೆಲೆ ನೀಡಲಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ. ಜಮೀನು ಖರೀದಿಸಿದಾಗ ಆರೋಪಿಗಳು ಟಾಡಾ ಅಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದರು ಎಂದು ಫಡ್ನವೀಸ್ ಬಹಿರಂಗಪಡಿಸಿದ್ದಾರೆ.












Click it and Unblock the Notifications