ಕೋವಿಡ್ ಸೋಂಕು; ನಟಿ ಐಶ್ವರ್ಯಾ ರೈ ಆಸ್ಪತ್ರೆಗೆ ದಾಖಲು

ಮುಂಬೈ, ಜುಲೈ 17 : ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಶ್ವರ್ಯಾ ರೈಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಕೆಲವು ದಿನಗಳ ಹಿಂದೆ ಖಚಿತವಾಗಿತ್ತು.

Recommended Video

      Bengaluru Lockdown ಮುಂದಿನ ವಾರವೂ ಇರುತ್ತಾ ? | Oneindia Kannada

      ಶುಕ್ರವಾರ ರಾತ್ರಿ ನಟಿ ಐಶ್ವರ್ಯಾ ರೈ ಮುಂಬೈ ನಗರದಲ್ಲಿರುವ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳ ಹಿಂದೆ ಐಶ್ವರ್ಯಾ ರೈ ಮತ್ತು ಅವರ ಪುತ್ರಿ ಆರಾಧ್ಯಾಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢವಾಗಿತ್ತು.

      Aishwarya Rai Bachchan Admitted To Hospital

      ಕೋವಿಡ್ ಸೋಂಕು ತಗುಲಿರುವುದು ಖಚಿತವಾದ ಬಳಿಕ ಐಶ್ವರ್ಯಾ ರೈ ಹೋಂ ಕ್ವಾರಂಟೈನ್‌ನಲ್ಲಿದ್ದರು. ಶುಕ್ರವಾರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಶ್ವರ್ಯಾ ಆರೋಗ್ಯದ ಬಗ್ಗೆ ಆಸ್ಪತ್ರೆ ಇನ್ನೂ ಯಾವುದೇ ಮಾಹಿತಿಯನ್ನು ನೀಡಿಲ್ಲ.

      ನಟ ಅಮಿತಾಬ್ ಬಚ್ಚನ್‌ಗೆ ಕೋವಿಡ್ ಸೋಂಕು ತಗುಲಿದ ಬಳಿಕ ಅವರನ್ನು ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಕುಟುಂಬ ಸದಸ್ಯರಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ಅಭಿಷೇಕ್ ಬಚ್ಚನ್, ಐಶ್ವರ್ಯಾ ಬಚ್ಚನ್ ಮತ್ತು ಆರಾಧ್ಯಗೆ ಸೋಂಕು ತಗುಲಿರುವುದು ಖಚಿತವಾಗಿತ್ತು.

      ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಶ್ವರ್ಯಾ ಅವರು ಪುತ್ರಿ ಜೊತೆ ಹೋಂ ಕ್ವಾರಂಟೈನ್‌ನಲ್ಲಿದ್ದರು. ಇಂದು ಅವರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಅಮಿತಾಬ್ ಬಚ್ಚನ್ ಪತ್ನಿ ಜಯಾ ಬಚ್ಚನ್ ಕೋವಿಡ್ ವರದಿ ನೆಗೆಟಿವ್ ಬಂದಿತ್ತು. ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಚ್ಚನ್ ಅವರ 'ಜಲ್ಸಾ' ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+