ಠಾಕ್ರೆ 'ಮಹಾ' ಸರ್ಕಾರದಲ್ಲಿ ಅಜಿತ್ ಪವಾರ್ ಪಾತ್ರವೇನು?
Recommended Video
ಮುಂಬೈ, ನವೆಂಬರ್ 29: ಎನ್‌ಸಿಪಿ ಮುಖಂಡ ಹಾಗೂ ಶರದ್ ಪವಾರ್ ಸಹೋದರ ಸಂಬಂಧಿ ಅಜಿತ್ ಪವಾರ್ ಅವರಿಗೆ ಉದ್ಧವ್ ಠಾಕ್ರೆ ಸಂಪುಟದಲ್ಲಿ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಬಹುತೇಕ ಖಚಿತವಾಗಿದೆ. ಆದರೆ ಮಾಸಾಂತ್ಯದಲ್ಲಿ ನಡೆಯುವ ಬಹುಮತ ಸಾಬೀತು ಪ್ರಕ್ರಿಯೆ ಬಳಿಕವೇ ಈ ಪ್ರಕ್ರಿಯೆ ನಡೆಯಲಿದೆ.
ಸದನದಲ್ಲಿ ಎಲ್ಲರೂ ಮೈತ್ರಿ ಪರವಾಗಿ ನಿಲ್ಲಬೇಕು, ಹಾಗೂ ಈ ಹಿಂದೆ ಬಿಜೆಪಿ ಜೊತೆ ಕಾಣಿಸಿಕೊಂಡಿದ್ದ ಅಜಿತ್ ಪವಾರ್ ಅವರ ಪ್ರಮಾಣಿಕತೆ ಪ್ರದರ್ಶವಾಗಬೇಕು ಎನ್ನುವ ಕಾರಣಕ್ಕೆ ಈ ರೀತಿ ನಿರ್ಣಯಕ್ಕೆ ಬರಲಾಗಿದೆ.
ಇದನ್ನು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹಾಗೂ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಇದನ್ನು ಹೇಗೆ ಸ್ವೀಕರಿಸುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಉದ್ಧವ್ ಸಂಪುಟದಲ್ಲಿ ಡಿಸಿಎಂಗಳಿಲ್ಲ
ಉದ್ಧವ್ ಠಾಕ್ರೆ ಜೊತೆಗೆ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್‌ನ ಕೆಲವು ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ ಆದರೆ ಅವರ್ಯಾರಿಗೂ ಡಿಸಿಎಂ ಹುದ್ದೆಯನ್ನು ನೀಡಲಾಗಿಲ್ಲ. ಅಜಿತ್ ಪವಾರ್‌ಗಾಗಿಯೇ ಕಾದು ಬಹುಮತ ಸಾಬೀತಿನ ಬಳಿಕ ಹುದ್ದೆ ಸೃಷ್ಟಿಸಿ ನೀಡಲು ಮೈತ್ರಿ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಇದರಿಂದ ಎನ್‌ಸಿಪಿ ಹಾಗೂ ಕಾಂಗ್ರೆಸ್‌ಗೆ ಮುಖಭಂಗ ಮಾಡಿ ಬಿಜೆಪಿ ಜೊತೆಗೆ ಕೈಜೋಡಿಸಿದ್ದ ಅಜಿತ್ ಪವಾರ್ ಅವರನ್ನು ದೂರವಿಡಲು ಮೈತ್ರಿ ಸರ್ಕಾರ ಸಿದ್ಧವಿಲ್ಲ.

ವಿಶ್ವಾಸದ್ರೋಹದ ಬಳಿಕವೂ ಕಡಿಮೆಯಾಗದ ಪ್ರಭಾವ
ಬಿಜೆಪಿ ಜೊತೆ ಕೈಜೋಡಿಸಿ ಸರ್ಕಾರ ರಚನೆ ಮಾಡಲು ಶಿವಸೇನೆ ಹಾಗೂ ಎನ್‌ಸಿಪಿ ಉತ್ಸಾಹ ತೋರಿ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯೂ ಆದರು.ಇದನ್ನು ನಂಬಿಕೆ ದ್ರೋಹ, ವಿಶ್ವಾಸದ್ರೋಹ ಎಂದೆಲ್ಲಾ ಕಾಂಗ್ರೆಸ್ ಹಾಗೂ ಶಿವಸೇನೆ ಪಕ್ಷಗಳು ದೂರಿದವು. ಪವಾರ್ ಕುಟುಂಬದಲ್ಲಿ ಒಡಕು ಸೃಷ್ಟಿಯಾಯಿತು. ಇಷ್ಟಾಗಿಯೂ ಅಜಿತ್ ಪವಾರ್ ಅವರನ್ನು ದೂರವಿಡಲು ಶರದ್ ಪವಾರ್‌ಗೆ ಆಗುತ್ತಿಲ್ಲ. ಇದಕ್ಕೆ ಕಾರಣವೂ ಇದೆ.

ಅಜಿತ್ ಪವಾರ್ ದೂರವಿಡಲು ಶರದ್‌ಗೆ ಆಗುತ್ತಿಲ್ಲ
ಪವಾರ್ ಕುಟುಂಬದಲ್ಲಿ ಅಜಿತ್ ಪವಾರ್ ಹಾಗೂ ಸುಪ್ರಿಯ ಸುಳೆ ಪ್ರಮುಖ ಪಾತ್ರವನ್ನು ಹೊಂದಿದ್ದಾರೆ. ಪುತ್ರಿ ಸುಪ್ರಿಯಾಳನ್ನು ಕಂಡರೆ ಶರದ್ ಪವಾರ್‌ಗೆ ಅತೀವ ಪ್ರೀತಿ ಇದ್ದರೂ ಅಜಿತ್ ಪವಾರ್ ಗೆ ಇರುವ ಜನಬೆಂಬಲ ಕಡೆಗಣಿಸಲು ಸಾಧ್ಯವಿಲ್ಲ. ಎನ್‌ಸಿಪಿ ಕಾರ್ಯಕರ್ತರ ಜೊತೆಗಿನ ಒಡನಾಟ ಹಾಗೂ ಪಕ್ಷ ಸಂಘಟನೆಯಲ್ಲಿ ಅಜಿತ್ ಪಾತ್ರ ದೊಡ್ಡದಿದೆ. ಶರದ್ ಬಿಟ್ಟರೆ ರಾಜ್ಯದಲ್ಲಿ ಕಾರ್ಯಕರ್ತರ ಜೊತೆ ಅತಿ ಹೆಚ್ಚು ಬೆರೆಯುತ್ತಿರುವ ನಾಯಕರಾಗಿದ್ದಾರೆ. ಹೀಗಾಗಿ ಅವರನ್ನು ಕಡೆಗಣಿಸಲು ಸಾಧ್ಯವಾಗುತ್ತಿಲ್ಲ.

ಶಾಸಕಾಂಗ ಪಕ್ಷದ ನಾಯಕತ್ವವೂ ದೊರೆಯಲಿದೆಯೇ?
ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದಾಗ ಅಜಿತ್ ಪವಾರ್ ಗಿದ್ದ ಶಾಸಕಾಂಗ ಪಕ್ಷದ ನಾಯಕತ್ವವನ್ನು ಕಿತ್ತುಕೊಳ್ಳಲಾಗಿತ್ತು. ಅದನ್ನು ಜಯಂತ್ ಪಾಟೀಲ್‌ಗೆ ನೀಡಿ ಈಗ ಅವರನ್ನು ಸಂಪುಟಕ್ಕೂ ಸೇರಿಸಿಕೊಳ್ಳಲಾಗಿದೆ. ಭವಿಷ್ಯದಲ್ಲಿ ಅಜಿತ್ ಪವಾರ್ ಡಿಸಿಎಂಬ ಹುದ್ದೆ ಅಲಂಕರಿಸುವ ಸಾಧ್ಯತೆ ಇರುವುದರಿಂದ ಮತ್ತೆ ಶಾಸಕಾಂಗ ಪಕ್ಷದ ನಾಯಕತ್ವವೂ ಅಜಿತ್ ಪವಾರ್‌ಗೆ ಒಲಿಯುವ ಸಾಧ್ಯತೆ ಇದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications