ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ವಾರಾಂತ್ಯದ ಲಾಕ್‌ಡೌನ್: ನಿಯಮಗಳನ್ನು ಓದಿ

|
Google Oneindia Kannada News

ಮುಂಬೈ, ಏಪ್ರಿಲ್ 04: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ವಾರಾಂತ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಭಾನುವಾರ ರಾಜ್ಯ ಸರ್ಕಾರ ಘೋಷಿಸಿದೆ.
ಮಹಾರಾಷ್ಟ್ರದಲ್ಲಿ ಪ್ರತಿ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೂ ಲಾಕ್ ಡೌನ್ ಜಾರಿಗೊಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲ್ಲಿಕ್ ಸ್ಪಷ್ಟಪಡಿಸಿದ್ದಾರೆ.

ಭಾರತದ ಕೊರೊನಾ ಕಥೆ: ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಭಾರತದ ಕೊರೊನಾ ಕಥೆ: ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ರಾತ್ರಿ ಕರ್ಫ್ಯೂ ಮುಂದುವರಿಯುತ್ತದೆ ಮತ್ತು ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ವಾರದಲ್ಲಿ ಹಗಲಿನ ವೇಳೆಯಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
"ವಾರಾಂತ್ಯದ ಲಾಕ್‌ಡೌನ್‌ನ ಹೊರತಾಗಿ, ನಾಳೆ ರಾತ್ರಿ 8 ಗಂಟೆಯಿಂದ ಕಟ್ಟುನಿಟ್ಟಿನ ನಿರ್ಬಂಧಗಳು ಜಾರಿಗೆ ಬರಲಿವೆ. ಅದರ ಅಡಿಯಲ್ಲಿ ಶಾಪಿಂಗ್ ಮಾಲ್‌ಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳು, ಸಣ್ಣ ಅಂಗಡಿಗಳಲ್ಲಿ ಪಾರ್ಸೆಲ್‌ಗಳಿಗೆ ಮಾತ್ರ ಅವಕಾಶವಿರುತ್ತದೆ. ಸರ್ಕಾರಿ ಕಚೇರಿಗಳಿಗೆ ಶೇ.50ರಷ್ಟು ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸಿಸಲಿದ್ದಾರೆ ಎಂದು ನವಾಬ್ ಮಲ್ಲಿಕ್ ತಿಳಿಸಿದ್ದಾರೆ.

Amid Coronavirus Rise, Weekend Lockdown Announced In Maharashtra

ಮಹಾರಾಷ್ಟ್ರದಲ್ಲಿ ಮಿನಿ ಲಾಕ್ ಡೌನ್ ಜಾರಿ:
1. ಹೋಟೆಲ್, ರೆಸ್ಟೋರೆಂಟ್, ಬಾರ್ ಬಂದ್; ಪಾರ್ಸೆಲ್‌ಗಳಿಗೆ ಮಾತ್ರ ಅವಕಾಶ
2. ಶಾಪಿಂಗ್ ಮಾಲ್‌ಗಳು, ಧಾರ್ಮಿಕ ಕೇಂದ್ರಗಳು ಬಂದ್
3. ಅಗತ್ಯ ವಸ್ತುಗಳು ಮತ್ತು ಕೈಗಾರಿಕೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ
4. ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಬೇಕು
5. ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಮಂತ್ರಾಲಯಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಅವಕಾಶ
6. ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ, ಆದರೆ ಟ್ಯಾಕ್ಸಿ, ಬಸ್, ಆಟೋಗಳಲ್ಲಿ ಪ್ರಯಾಣಿಕರಿಗೆ ಮಿತಿ ನಿಗದಿ
7. ವಾರಾಂತ್ಯದಲ್ಲಿ ಅಂದರೆ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 8 ಗಂಟೆವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿ
8. ಯಾವುದೇ ರಾಜಕೀಯ ಸಭೆ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ
9. ಮೂರೂ ಆಡಳಿತ ಪಕ್ಷಗಳು ಸರ್ವಾನುಮತದ ನಿರ್ಧಾರ ಕೈಗೊಂಡು ಬಿಜೆಪಿ ಮತ್ತು ಎಂಎನ್‌ಎಸ್‌ನೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಂಡಿವೆ

English summary
Amid Coronavirus Rise, Weekend Lockdown Announced In Maharashtra
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X