ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮುಂಬೈ ಪಾಲಿಕೆಯ ಹೊಸ ಮಾರ್ಗಸೂಚಿ

|
Google Oneindia Kannada News

ಮುಂಬೈ, ಮಾರ್ಚ್ 21: ಕೊರೊನಾವೈರಸ್ ಸೋಂಕಿಗೆ ಸಂಬಂಧಿಸಿದ ಎರಡು ಡೋಸ್ ಲಸಿಕೆಯನ್ನು ಪಡೆದ ಅಂತಾರಾಷ್ಟ್ರೀಯ ಪ್ರವಾಸಿಗರು ಸಾಂಸ್ಥಿಕ ದಿಗ್ಬಂಧನಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಂಬೈ ಮಹಾನಗರ ಪಾಲಿಕೆ ಸ್ಪಷ್ಟಪಡಿಸಿದೆ.
ಇಂಗ್ಲೆಂಡ್, ಯುರೋಪ್, ಮಧ್ಯ ಏಷ್ಯಾ, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ನಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಮಾಣಿಕರು ಕಡ್ಡಾಯವಾಗಿ 7 ದಿನಗಳವರೆಗೂ ಸಾಂಸ್ಥಿಕ ದಿಗ್ಬಂಧನಕ್ಕೆ ಒಳಗಾಗಬೇಕು. ಆದರೆ ಕೊವಿಡ್-19 ಲಸಿಕೆಯ ಎರಡೂ ಡೋಸ್ ಪಡೆದುಕೊಂಡವರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ ಹೆಚ್ಚಾಗುವುದರ ಹಿಂದಿನ ಗುಟ್ಟು
ಮಹಾರಾಷ್ಟ್ರಕ್ಕೆ ಆಗಮಿಸುವ ಪ್ರತಿಯೊಬ್ಬ ಅಂತಾರಾಷ್ಟ್ರೀಯ ಪ್ರಯಾಣಿಕರು 72 ಗಂಟೆಗಳಿಗೂ ಮೊದಲು ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಕೊರೊನಾವೈರಸ್ ಸೋಂಕಿನ ನೆಗೆಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮುಂಬೈ ಮಹಾನಗರ ಪಾಲಿಕೆ ನೀಡಿರುವ ಮಾರ್ಗಸೂಚಿಗಳು ಹೀಗಿದೆ.

Amid Covid Cases Rise In Mumbai: BMC New Rules For International Passengers

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮುಂಬೈ ಪಾಲಿಕೆ ಮಾರ್ಗಸೂಚಿ:
- 65 ವರ್ಷಕ್ಕಿಂತ ಮೇಲ್ಪಟ್ಟ ಪ್ರಯಾಣಿಕರು, ಗರ್ಭಿಣಿಯರು ಹಾಗೂ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೊಂದಿಗೆ ಆಗಮಿಸಿದ ಪೋಷಕರಿಗೆ ಸಾಂಸ್ಥಿಕ ದಿಗ್ಬಂಧನದಿಂದ ವಿನಾಯಿತಿ ನೀಡಿದೆ
- ಕ್ಯಾನ್ಸರ್, ದೈಹಿಕ ಅಂಗವೈಕಲ್ಯ, ಮಾನಸಿಕ ಅಸ್ವಸ್ಥತೆ ಮತ್ತು ಸೆರೆಬ್ರಲ್ ಪಾಲ್ಸಿ ಮುಂತಾದ ಕಾಯಿಲೆಗಳನ್ನು ಹೊಂದಿರುವ ಪ್ರಯಾಣಿಕರಿಗೂ ಸಾಂಸ್ಥಿಕ ದಿಗ್ಬಂಧನ ನಿಯಮದಿಂದ ಹೊರಗಿಡಲಾಗಿದೆ
- ಶಸ್ತ್ರಚಿಕಿತ್ಸೆ ಅಥವಾ ವೈದ್ಯಕೀಯ ಸೇವೆಯನ್ನು ಒದಗಿಸಲು ವಿದೇಶಗಳಿಂದ ಆಗಮಿಸುವ ವೈದ್ಯಕೀಯ ಸಿಬ್ಬಂದಿ ಮತ್ತು ತಜ್ಞವೈದ್ಯರು ಅಗತ್ಯ ದಾಖಲೆಗಳನ್ನು ನೀಡಿದರೆ ಅಂಥವರಿಗೂ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ

ಮುಂಬೈನಲ್ಲೇ 3775 ಮಂದಿಗೆ ಕೊರೊನಾವೈರಸ್:
ಮಹಾರಾಷ್ಟ್ರದ ಮುಂಬೈನಲ್ಲೇ 24 ಗಂಟೆಗಳಲ್ಲಿ 3775 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,62,654ಕ್ಕೆ ಏರಿಕೆಯಾಗಿದೆ. ಒಂದೇ ದಿನ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 11,582ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲೇ 23448 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗಿದೆ.

English summary
Amid Covid Cases Rise In Mumbai: BMC New Rules For International Passengers
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X