• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ 6 ಸಾವಿರದ ಗಡಿ ದಾಟಿದ ಕೊರೊನಾವೈರಸ್ ಅಪಾಯ

|

ಮುಂಬೈ, ಫೆಬ್ರವರಿ.19: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 6 ಸಾವಿರಕ್ಕೂ ಹೆಚ್ಚು ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ಗೊತ್ತಾಗಿದೆ.

ರಾಜ್ಯದಲ್ಲಿ ಒಂದೇ ದಿನ 6,112 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 20,87,632ಕ್ಕೆ ಏರಿಕೆಯಾಗಿದೆ.

ಹೊಸ ದಾಖಲೆ: ಭಾರತದಲ್ಲಿ 1 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ

ಒಂದೇ ದಿನ ಮಹಾಮಾರಿ ಕೊವಿಡ್-19 ಸೋಂಕಿಗೆ 44 ಜನರು ಪ್ರಾಣ ಬಿಟ್ಟಿದ್ದು, 2159 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ 51,713 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 19,89,963 ಸೋಂಕಿತರು ಗುಣಮುಖರಾಗಿದ್ದಾರೆ. 44,765 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಮೂರು ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್ ಡೌನ್:

ಮಹಾರಾಷ್ಟ್ರದ ಅಮರಾವತಿ, ಯವತ್ಮಲ್ ಮತ್ತು ಅಕೋಲಾ ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಫೆಬ್ರವರಿ.20ರ ರಾತ್ರಿ 8 ಗಂಟೆಯಿಂದ ಫೆಬ್ರವರಿ.22ರ ಬೆಳಗ್ಗೆ 7 ಗಂಟೆವರೆಗೂ ನಿಷೇಧಾಾಜ್ಞೆ ಜಾರಿಯಲ್ಲಿರುತ್ತದೆ. ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೂ ಎಲ್ಲ ಮಾರುಕಟ್ಟೆಗಳು ಬಂದ್ ಆಗಲಿವೆ ಎಂದು ಅಮರಾವತಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ದಿಲೀಪ್ ರಾನ್ಮೇಲೆ ತಿಳಿಸಿದ್ದಾರೆ.

ಹೊಸ ನಿಯಮ ಜಾರಿಗೊಳಿಸಿದ ಮುಂಬೈ ಮಹಾನಗರ ಪಾಲಿಕೆ:

ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹೊಸ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡದಿದ್ದರೆ ದಂಡ ವಿಧಿಸುವಂತೆ ಸೂಚಿಸಲಾಗಿದೆ. ಹೊಸ ಮಾರ್ಗಸೂಚಿ ಮತ್ತು ನಿಯಮಗಳಲ್ಲಿನ ಪ್ರಮುಖ ಅಂಶಗಳು ಇಲ್ಲಿವೆ ನೋಡಿ.

ಮುಂಬೈ ಮಹಾನಗರ ಪಾಲಿಕೆಯ ಹೊಸ ಮಾರ್ಗಸೂಚಿ:

- ಒಂದು ಕಟ್ಟಡದಲ್ಲಿ 5ಕ್ಕಿಂತ ಹೆಚ್ಚು ಕೊವಿಡ್-19 ಸೋಂಕಿತರು ಕಂಡು ಬಂದಲ್ಲಿ ಕಟ್ಟಡವನ್ನು ಸೀಲ್ ಮಾಡುವುದು

- ಗೃಹ ದಿಗ್ಬಂಧನದಲ್ಲಿ ಇರುವ ಕೊರೊನಾವೈರಸ್ ಸೋಂಕಿತರ ಕೈಗಳಿಗೆ ಸ್ಟ್ಯಾಂಪ್ ಹಚ್ಚುವುದು

- ಸ್ಥಳೀಯ ರೈಲುಗಳಲ್ಲಿ ಮಾಸ್ಕ್ಲ ಧರಿಸದೇ ಸಂಚರಿಸುವವರ ಮೇಲೆ ನಿಗಾ ವಹಿಸಲು 300 ಮಾರ್ಷಲ್ ಗಳನ್ನು ನೇಮಿಸಿಕೊಳ್ಳುವುದು

- ಮುಂಬೈನಲ್ಲಿ ನಿಯಮ ಉಲ್ಲಂಘಿಸುವವರ ಮೇಲೆ ಲಕ್ಷ್ಯ ವಹಿಸಲು ಹೆಚ್ಚುವರಿ ಮಾರ್ಷಲ್ ನೇಮಕ

- ಕೊವಿಡ್-19 ನಿಯಮ ಉಲ್ಲಂಘಿಸುವ ಮದುವೆ ಸಭಾ ಭವನ, ಕ್ಲಬ್, ರೆಸ್ಟೋರೆಂಟ್ ಗಳ ಮೇಲೆ ದಾಳಿ ಮಾಡುವುದು

- ಬ್ರೆಜಿಲ್ ನಿಂದ ಆಗಮಿಸಿದ ಪ್ರಯಾಣಿಕರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರೆಂಟೈನ್ ನಲ್ಲಿ ಇರಿಸುವುದು

- ಹೆಚ್ಚು ಹೆಚ್ಚು ಸೋಂಕಿತರು ಕಂಡು ಬರುವ ಪ್ರದೇಶದಲ್ಲಿ ಕೊರೊನಾವೈರಸ್ ತಪಾಸಣೆಯನ್ನು ಹೆಚ್ಚಿಸುವುದು

English summary
Amid Strict Guidelines Imposed In 3 Districts, Maharashtra records over 6,000 new Coronavirus Cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X