ಅಮಿತಾಬ್ ನಿವಾಸ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ
ಮುಂಬೈ, ಜುಲೈ 12 : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಾನುವಾರ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ಅಮಿತಾಬ್ ಬಚ್ಚನ್ ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ, ಫಲಕವನ್ನು ಹಾಕಿದ್ದಾರೆ. ಮನೆಗೆ ಯಾರೂ ಸಹ ಪ್ರವೇಶ ಮಾಡುವಂತಿಲ್ಲ.
ಪಾಲಿಕೆಯ ಸಿಬ್ಬಂದಿ ಮನೆಯನ್ನು ಸ್ಯಾನಿಟೈಸ್ ಮಾಡಲು ಆಗಮಿಸಿದ್ದಾರೆ. ಶನಿವಾರ ರಾತ್ರಿ ಅಮಿತಾನ್ ಬಚ್ಚನ್‌ರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿತ್ತು.

ಜಯಾ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈಗೂ ಸಹ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ನಡೆಸಲಾಯಿತು. ಅಭಿಷೇಕ್ ಬಚ್ಚನ್‌ಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಅವರನ್ನು ಸಹ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಮಿತಾಬ್ ಬಚ್ಚನ್ ಆರೋಗ್ಯ ಸ್ಥಿರವಾಗಿದೆ ಎಂದು ಮುಂಬೈನ ನಾನಾವತಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಐಸೋಲೇಷನ್ ವಾರ್ಡ್‌ನಲ್ಲಿ ಅವರು ಇದ್ದಾರೆ ಎಂದು ಆಸ್ಪತ್ರೆಯ ಪಿಆರ್‌ಓ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.












Click it and Unblock the Notifications