• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಮಿತಾಬ್ ನಿವಾಸ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ

|

ಮುಂಬೈ, ಜುಲೈ 12 : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

ಭಾನುವಾರ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ಅಮಿತಾಬ್ ಬಚ್ಚನ್ ನಿವಾಸವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ, ಫಲಕವನ್ನು ಹಾಕಿದ್ದಾರೆ. ಮನೆಗೆ ಯಾರೂ ಸಹ ಪ್ರವೇಶ ಮಾಡುವಂತಿಲ್ಲ.

ಕೊರೊನಾ ಎಫೆಕ್ಟ್‌: ಉಬರ್‌ನ ಮುಂಬೈ ಕಚೇರಿ ಶಾಶ್ವತವಾಗಿ ಬಂದ್

ಪಾಲಿಕೆಯ ಸಿಬ್ಬಂದಿ ಮನೆಯನ್ನು ಸ್ಯಾನಿಟೈಸ್ ಮಾಡಲು ಆಗಮಿಸಿದ್ದಾರೆ. ಶನಿವಾರ ರಾತ್ರಿ ಅಮಿತಾನ್ ಬಚ್ಚನ್‌ರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿತ್ತು.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ: ಡೇಂಜರ್ ಜೋನ್‌ನಲ್ಲಿ ಮುಂಬೈ, ಪುಣೆ

ಜಯಾ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈಗೂ ಸಹ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ನಡೆಸಲಾಯಿತು. ಅಭಿಷೇಕ್ ಬಚ್ಚನ್‌ಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಅವರನ್ನು ಸಹ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಣೇಶ ಉತ್ಸವಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪ್ರಕಟಿಸಿದ ಮಹಾರಾಷ್ಟ್ರ

ಅಮಿತಾಬ್ ಬಚ್ಚನ್ ಆರೋಗ್ಯ ಸ್ಥಿರವಾಗಿದೆ ಎಂದು ಮುಂಬೈನ ನಾನಾವತಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಐಸೋಲೇಷನ್ ವಾರ್ಡ್‌ನಲ್ಲಿ ಅವರು ಇದ್ದಾರೆ ಎಂದು ಆಸ್ಪತ್ರೆಯ ಪಿಆರ್‌ಓ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

English summary
Brihanmumbai Municipal Corporation officials put a banner outside Jalsa the residence of actor Amitabh Bachchan in Mumbai and announced house as containment zone after Amitabh Bachchan and Abhishek Bachchan tested positive for COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X