• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಮಿತಾಬ್ ಬಚ್ಚನ್‌ಗೆ ಕೊರೊನಾ ನೆಗೆಟಿವ್ ವರದಿ ನಿಜನಾ?

|

ಮುಂಬೈ, ಜುಲೈ 23: ಕೊರೊನಾ ಸೋಂಕಿ ದೃಢಪಟ್ಟು ಇತ್ತೀಚೆಗೆ ಆಸ್ಪತ್ರೆ ಸೇರಿರುವ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‌ಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಖುದ್ದಾಗಿ ಬಚ್ಚನ್ ಅವರೇ ಹೇಳಿಕೊಂಡಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.

ಅಮಿತಾಬ್ ನಿವಾಸ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ

ಸುದ್ದಿವಾಹಿನಿಯೊಂದರಲ್ಲಿ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂಬ ಸುದ್ದಿಯನ್ನು ಬಿತ್ತರಿಸಲಾಗಿತ್ತು. ನಾನಾವತಿ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ ಎಂದು ಕೂಡ ತಿಳಿಸಿದ್ದರು.

ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

ಜುಲೈ 11 ರಂದು ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ವರದಿ ಪಾಸಿಟಿವ್ ಬಂದಿತ್ತು. ಬಳಿಕ ಅವರ ಪುತ್ರ ಅಭಿಷೇಕ್ ಬಚ್ಚನ್‌ಗೂ ಕೊರೊನಾ ಇರುವುದು ದೃಢಪಟ್ಟಿತ್ತು. ಅವರನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಐಶ್ವರ್ಯಾ ರೈ ಬಚ್ಚನ್ ಗೂ ಸೋಂಕು ತಗುಲಿತ್ತು, ಒಂದು ವಾರಗಳ ಕಾಲ ಮನೆಯಲ್ಲಿಯೇ ಇದ್ದರು ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು.

ನನಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದಿರುವ ಸುದ್ದಿ ಸುಳ್ಳು ಎಂದು ಅಮಿತಾಬ್ ಸ್ಪಷ್ಟಪಡಿಸಿದ್ದಾರೆ.

ನಾನಾವತಿ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದು,ಅಮಿತಾಬ್ ಬಚ್ಚನ್ ಹಾಗೂ ಅಭಿಷೇಕ್‌ಗೆ ಕೊರೊನಾ ಸೋಂಕು ಇದ್ದರೂ ಸಣ್ಣ ಪ್ರಮಾಣದ ಲಕ್ಷಣಗಳಿತ್ತು. ಅವರನ್ನು ಐಸೊಲೇಷನ್‌ ವಾರ್ಡ್‌ನಲ್ಲಿರಿಸಲಾಗಿದೆ.

ಕೊರೊನಾ ವೈರಸ್‌ ಬಾಲಿವುಡ್‌ ನಾಯಕರಿಗೂ ಸಂಕಷ್ಟ ತಂದೊಡ್ಡಿದೆ. ಅಮಿರ್ ಖಾನ್, ಕರಣ್ ಜೋಹರ್, ಬೋನಿ ಕಪೂರ್ ಮನೆಯ ಕೆಲಸವರಿಗೂ ಸೋಂಕು ತಗುಲಿದೆ. ರೇಖಾ ಮನೆಯ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಬಂದಿರುವ ಕಾರಣ ರೇಖಾ ಅವರ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ.

English summary
Actor Amitabh Bachchan, currently in Mumbai's Nanavati Hospital, has called news reports that he just tested negative for COVID-19 "incorrect, irresponsible, fake and an incorrigible lie.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X