ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸೋಂಕು ನಿಯಂತ್ರಣಕ್ಕೆ ಉದ್ಯಮಿ ಆನಂದ್ ಮಹೀಂದ್ರಾ ಸಲಹೆ

|
Google Oneindia Kannada News

ಮುಂಬೈ, ಮಾರ್ಚ್ 16: ಮಹಾರಾಷ್ಟ್ರದಲ್ಲಿ ದಿನೇ ದಿನೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಉದ್ಯಮಿ ಆನಂದ್ ಮಹೀಂದ್ರಾ ಸಲಹೆ ನೀಡಿದ್ದಾರೆ.

ಮಹಾರಾಷ್ಟ್ರವು ದೇಶದ ಆರ್ಥಿಕ ಚಟುವಟಿಕೆಯ ಕೇಂದ್ರ ಬಿಂದು, ಮತ್ತಷ್ಟು ಲಾಕ್‌ಡೌನ್ ಮಾಡುವುದರಿಂದ ರಾಜ್ಯಕ್ಕೆ ನಷ್ಟ ಹೆಚ್ಚಾಗಲಿದೆ ಎಂದಿದ್ದಾರೆ.

ನಮ್ಮ ಲಸಿಕೆ ತೆಗೆದುಕೊಂಡರೆ ಮಾತ್ರ ಒಳಗೆ ಪ್ರವೇಶ: ಚೀನಾನಮ್ಮ ಲಸಿಕೆ ತೆಗೆದುಕೊಂಡರೆ ಮಾತ್ರ ಒಳಗೆ ಪ್ರವೇಶ: ಚೀನಾ

ಸೋಮವಾರ ಮಹಾರಾಷ್ಟ್ರದಲ್ಲಿ 16 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಈ ವರ್ಷ ದಾಖಲೆಯಾದ ಅತಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆ ಇದಾಗಿದೆ.

ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ

ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಆನಂದ್ ಮಹೀಂದ್ರಾ ಸಲಹೆ ನೀಡಿದ್ದು, ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು. ಹಿರಿಯ ನಾಗರಿಕರು, ಆರೋಗ್ಯ ಕಾರ್ಯಕರ್ತರು ಅಂತಿಲ್ಲದೆ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಆಗ ಮಾತ್ರ ಸೋಂಕು ನಿಯಂತ್ರಣ ಸ್ವಲ್ಪ ಮಟ್ಟಿಗೆ ಸಾಧ್ಯ ಎಂದಿದ್ದಾರೆ.

ದೇಶದ ಒಟ್ಟು ಪ್ರಕರಣಗಳಲ್ಲಿ ಮಹಾರಾಷ್ಟ್ರದಲ್ಲೇ ಶೇ.50 ರಷ್ಟು ಪ್ರಕರಣ

ದೇಶದ ಒಟ್ಟು ಪ್ರಕರಣಗಳಲ್ಲಿ ಮಹಾರಾಷ್ಟ್ರದಲ್ಲೇ ಶೇ.50 ರಷ್ಟು ಪ್ರಕರಣ

ದೇಶದ ಒಟ್ಟು ಪ್ರಕರಣಗಳಲ್ಲಿ ಮಹಾರಾಷ್ಟ್ರದಲ್ಲೇ ಶೇ.50ರಷ್ಟು ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಮಹಾರಾಷ್ಟ್ರವು ಆರ್ಥಿಕತೆಯ ಕೇಂದ್ರಬಿಂದು

ಮಹಾರಾಷ್ಟ್ರವು ಆರ್ಥಿಕತೆಯ ಕೇಂದ್ರಬಿಂದು

ಮಹಾರಾಷ್ಟ್ರವು ದೇಶದ ಆರ್ಥಿಕತೆಯ ಕೇಂದ್ರಬಿಂದುವಾಗಿದೆ, ಪದೇ ಪದೇ ಲಾಕ್‌ಡೌನ್ ಮಾಡುವುದರಿಂದ ದೇಶದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಹೀಗಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಲಸಿಕೆಯ ವೇಗ ಹೆಚ್ಚಿಸಬೇಕು

ಲಸಿಕೆಯ ವೇಗ ಹೆಚ್ಚಿಸಬೇಕು

ಅವರು ಮಾಡಿರುವ ಎರಡನೇ ಟ್ವೀಟ್‌ನಲ್ಲಿ ಲಸಿಕೆ ವೇಗದ ಕುರಿತು ಮಾತನಾಡಿದ್ದಾರೆ. ಹೌದು, ಲಸಿಕೆಯ ವೇಗವನ್ನು ಹೆಚ್ಚಿಸಿ ಬಹುಬೇಗ ಎಲ್ಲರಿಗೂ ಲಸಿಕೆ ದೊರೆಯುವಂತೆ ನೋಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ನಿತ್ಯ 16 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಪುಣೆ, ಹಿಂಗೋಲಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

ಭಾರತದಲ್ಲಿ 24 ಗಂಟೆಯಲ್ಲಿ ವರದಿಯಾದ ಪ್ರಕರಣಗಳು

ಭಾರತದಲ್ಲಿ 24 ಗಂಟೆಯಲ್ಲಿ ವರದಿಯಾದ ಪ್ರಕರಣಗಳು

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 24492 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ಒಂದೇ ದಿನ ವೈರಸ್ 131 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,56,014ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟಾರೆ 1,14,09,831 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 20,191 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,27,543 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,23,432 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

English summary
Industrialist Anand Mahindra took to Twitter to voice his concern about rising coronavirus cases in Maharashtra and suggested that the state needs "emergency permission" to vaccinate everyone willing to take the jab.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X