ಲೋಕಪಾಲ ನೇಮಕ: ಗಾಂಧಿವಾದಿ ಅಣ್ಣಾ ಹಜಾರೆ ಪ್ರತಿಕ್ರಿಯೆ

ದೇಶದ ಮೊದಲ ಲೋಕಪಾಲರಾಗಿ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತವಾಗಿದ್ದು, ಈ ನಡೆಯನ್ನು ಗಾಂಧಿವಾದಿ ಅಣ್ಣಾ ಹಜಾರೆ ಸ್ವಾಗತಿಸಿದ್ದಾರೆ.

"ಸರ್ಕಾರದ ಮೇಲೆ ನಾವು ಅತಿಯಾಗಿ ಒತ್ತಡ ಹೇರಿದ್ದರಿಂದಲೇ ಲೋಕಪಾಲರನ್ನು ನೇಮಿಸುವ ಕೆಲಸ ಮಾಡಲಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಒಂಬತ್ತು ವರ್ಷದ ಹಿಂದೆ ನಾವು ಆರಂಭಿಸಿದ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಈಗ ಫಲ ಸಿಕ್ಕಂತಾಗಿದೆ. ಸುಪ್ರೀಂ ಕೋರ್ಟ್ ಮತ್ತು ಹೋರಾಟಗಾರರ ಒತ್ತಡದಿಂದಲೇ ಇದು ಸಾಧ್ಯವಾಗಿದೆ" ಎಂದು ಅಣ್ಣಾ ಝಜಾರೆ ಹೇಳಿದರು.

2011 ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆ ನೀಡುವಂತೆ ಅಣ್ಣಾ ಹಜಾರೆ ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಅಂದಿನ ಯುಪಿಎ ಸರ್ಕಾರದ ಮೇಲೆ ಸಾಕಷ್ಟು ಪ್ರಭಾವ ಬೀರಿತ್ತು.

Appointing Lokpal: What Anna Hazare tells

ಅದಾದ ನಂತರ 81 ವರ್ಷ ವಯಸ್ಸಿನ ಅಣ್ಣಾ ಹಜಾರೆ ಹಲವು ಬಾರಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಕಳೆದ ಜನವರಿ ತಿಂಗಳಿನಲ್ಲಿ ಅವರು ನಡೆಸಿದ್ದ ಉಪವಾಸ ಸತ್ಯಾಗ್ರಹವನ್ನು, ಸರ್ಕಾರ ಲೋಕಪಾಲ ನೇಮಿಸುವ ಭರವಸೆ ನೀಡುತ್ತಿದ್ದಂತೆಯೇ ವಾಪಸ್ ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+