ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತ್ಮಹತ್ಯೆ ಪ್ರಕರಣ: ದೋಷಾರೋಪ ಪಟ್ಟಿ ಸಲ್ಲಿಸದಂತೆ ತಡೆ ಕೋರಿ ಅರ್ನಬ್ ಅರ್ಜಿ

|
Google Oneindia Kannada News

ಮುಂಬೈ, ಡಿಸೆಂಬರ್ 03:ಅನ್ವರ್ ನಾಯ್ಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋ ಸ್ವಾಮಿ ಇದೀಗ ದೋಷಾರೋಪ ಪಟ್ಟಿ ಸಲ್ಲಿಸದಂತೆ ತಡೆಕೋರಿ ಅರ್ಜಿ ಸಲ್ಲಿಸಿದ್ದಾರೆ.

ಅರ್ನಬ್ ಗುರುವಾರ ಬಾಂಬೆ ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಲ್ಲಿ ಒಬ್ಬರಾದ ಅರ್ನಬ್ ಅವರನ್ನು ಕಳೆದ ತಿಂಗಳು ಅಲಿಬಾಗ್ ಪೊಲೀಸರು ಬಂಧಿಸಿದ್ದರು.

ಮುಂಬೈನಲ್ಲಿ ಬೆಳ್ಳಂಬೆಳಿಗ್ಗೆ ಹೈಡ್ರಾಮಾ: ಅರ್ನಬ್ ಗೋಸ್ವಾಮಿ ಬಂಧನಮುಂಬೈನಲ್ಲಿ ಬೆಳ್ಳಂಬೆಳಿಗ್ಗೆ ಹೈಡ್ರಾಮಾ: ಅರ್ನಬ್ ಗೋಸ್ವಾಮಿ ಬಂಧನ

ಸುಪ್ರೀಂಕೋರ್ಟ್ ಅರ್ನಬ್‌ಗೆ ಇತ್ತೀಚೆಗೆ ಜಾಮೀನು ನೀಡಿತ್ತು.ನ.4 ರಂದು ನನ್ನನ್ನು ಬಂಧಿಸಿರುವುದು ಕಾನೂನು ಬಾಹಿರ , ಈ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ಹೈಕೋರ್ಟ್ ವರ್ಗಾಯಿಸಬೇಕು ಎಂದು ಕೋರಲಾಗಿದೆ.

Arnab Goswami Seeks Stay To Filing Of Chargesheet In Suicide Case

ಪ್ರಕರಣವನ್ನು ರಾಜ್ಯ ಸಿಐಡಿಯಿಂದ ಮರು ತನಿಖೆಗೆ ಒಳಪಡಿಸುವಂತೆ ಆದೇಶಿಸಲು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಅಧಿಕಾರವಿಲ್ಲ. ಏಕೆಂದರೆ ಈ ಹಿಂದೆ ರಾಯ್‌ಗಢ ಜಿಲ್ಲೆಯ ಅಲಿಬಾಗ್ ಪೊಲೀಸರು ನಡೆಸಿದ ಪೊಲೀಸರು ನಡೆಸಿದ ತನಿಖೆಯನ್ನು ಕಳೆದ ವರ್ಷವೇ ಅಂತ್ಯಗೊಳಿಸಬೇಕಿತ್ತು ಎಂದು ಅರ್ನಬ್ ಅರ್ಜಿಯಲ್ಲಿ ತಿಳಿಸಿದ್ದಾರೆ.

English summary
Republic TV editor-in-chief Arnab Goswami on Thursday filed an urgent application before the Bombay High Court, seeking a stay to the filing of chargesheet and further proceedings in the 2018 Anvay Naik abetment to suicide case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X