ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳ: 25,833 ಮಂದಿಗೆ ಸೋಂಕು

|
Google Oneindia Kannada News

ಮುಂಬೈ, ಮಾರ್ಚ್ 18: ಮಹಾರಾಷ್ಟ್ರದಲ್ಲಿ ಹೊಸದಾಗಿ 25,833 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಕಳೆದ 24 ಗಂಟೆಯಲ್ಲಿ 58 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಿದೆ. ಬುಧವಾರದ ಮಾಹಿತಿ ಪ್ರಕಾರ ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.60 ರಷ್ಟು ಸಕ್ರಿಯ ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ ಎಂದು ಹೇಳಲಾಗಿತ್ತು.

ದೇಶದ ಶೇ.60ರಷ್ಟು ಸಕ್ರಿಯ ಕೊರೊನಾ ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ: ಆರೋಗ್ಯ ಇಲಾಖೆದೇಶದ ಶೇ.60ರಷ್ಟು ಸಕ್ರಿಯ ಕೊರೊನಾ ಪ್ರಕರಣಗಳು ಮಹಾರಾಷ್ಟ್ರದಲ್ಲಿವೆ: ಆರೋಗ್ಯ ಇಲಾಖೆ

ದೇಶದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಗುರುವಾರ ಭಾರತದಲ್ಲಿ ಬರೋಬ್ಬರಿ 35,871 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದು ಈ ವರ್ಷದ ಅತಿ ಗರಿಷ್ಠ ಏಕದಿನದ ಪ್ರಕರಣವಾಗಿದೆ.

 At 25,833, Maharashtra Reports Highest Daily Rise In Covid Cases

ಇನ್ನು ಒಂದೇ ದಿನ ವೈರಸ್ 172 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟಾರೆ 1,14,74,605 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,10,63,025ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,52,364 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 3,71,43,255 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

English summary
Maharashtra has logged 25,833 fresh cases of Covid over the last 24 hours -- highest since the outbreak of the pandemic last year. In the same period, 58 deaths have taken place, marking a sharp rise in both the number of cases and fatalities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X