ಮುಂಬೈ ಮೇಲೆ ಉಗ್ರರ ದಾಳಿ; ಕರಾಚಿಯಿಂದ ಬಂತು ಬೆದರಿಕೆ ಕರೆ
ಮುಂಬೈ, ಜೂನ್ 30 : ಮುಂಬೈ ನಗರದ ಮೇಲೆ ಉಗ್ರರ ದಾಳಿ ನಡೆಯಲಿದೆ ಎಂದು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ನಗರದ ಸೂಕ್ಷ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಸೋಮವಾರ ರಾತ್ರಿ ಮುಂಬೈ ಪೊಲೀಸರಿಗೆ ಪಾಕಿಸ್ತಾನದ ಕರಾಚಿಯಿಂದ ಬೆದರಿಕೆ ಕರೆ ಬಂದಿದೆ. ಮುಂಬೈ ನಗರದ ಹೋಟೆಲ್‌ಗಳ ಮೇಲೆ ಉಗ್ರರು ದಾಳಿ ನಡೆಸಲಿದ್ದಾರೆ ಎಂದು ಫೋನ್ ಮಾಡಿದ ವ್ಯಕ್ತಿ ಮಾಹಿತಿ ನೀಡಿದ್ದಾನೆ.
ಕರೆ ಬಂದ ತಕ್ಷಣ ಪೊಲೀಸರು ತಾಜ್ ಹೋಟೆಲ್ ಸೇರಿದಂತೆ ಸುತ್ತ-ಮುತ್ತಲ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದು ಹುಸಿ ಕರೆಯಾಗಿರುವ ಸಾಧ್ಯಯೂ ಇದೆ. ಆದರೆ, ಪರಿಸ್ಥಿತಿ ಎದುರಿಸಲು ಪೊಲೀಸರು ಸಜ್ಜಾಗಿದ್ದು, ಭದ್ರತೆಯನ್ನು ಒದಗಿಸಿದ್ದಾರೆ.

ಕಳೆದ ವಾರ ದೆಹಲಿಗೆ ಐವರು ಉಗ್ರರು ಆಗಮಿಸಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ತಿಂಗಳಿನಿಂದ ಉಗ್ರರು ಸಕ್ರಿಯರಾಗಿದ್ದಾರೆ. ಹಲವಾರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.
ಮಂಗಳವಾರ ಮುಂಜಾನೆ ಸಹ ಬಿಜ್ವಾರದಲ್ಲಿ ಸಿಆರ್‌ಪಿಎಫ್ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನೂ ಯಾವುದಾದರೂ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಯೇ? ಎಂದು ಯೋಧರು ಹುಡುಕಾಟ ನಡೆಸುತ್ತಿದ್ದಾರೆ.












Click it and Unblock the Notifications