ಇಂಡಿಗೋ ಉದ್ಯೋಗಿಗೆ ಲೈಂಗಿಕ ಕಿರುಕುಳ, ಬೆಂಗ್ಳೂರು ವ್ಯಕ್ತಿ ಬಂಧನ

ಮುಂಬೈ, ಅಕ್ಟೋಬರ್ 18: ಇಂಡಿಗೋ ವಿಮಾನ ಯಾನ ಸಂಸ್ಥೆಯ ಮಹಿಳಾ ಉದ್ಯೋಗಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರು ಮೂಲದ 28 ವರ್ಷ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಂಬೈನಿಂದ ಬೆಂಗಳೂರಿಗೆ ವಿಮಾನ ಹೊರಡುವ ಮುಂಚೆ ಇಪ್ಪತ್ತು ವರ್ಷದ ಮಹಿಳಾ ಅಟೆಂಡೆಂಟ್ ರನ್ನು ಹಿಂಭಾಗದಿಂದ ಅಸಭ್ಯವಾಗಿ ಸ್ಪರ್ಶಿಸಿದ್ದು, ಅದಕ್ಕೆ ಆಕ್ಷೇಪಿಸಿದ್ದಕ್ಕೆ ಪ್ರಯಾಣಿಕ ಬೈದಿರುವುದಾಗಿ ವರದಿಯಾಗಿದೆ.

ಮಂಗಳವಾರದಂದು ಈ ಘಟನೆ ನಡೆದಿದ್ದು, ಇದರ ಬಗ್ಗೆ ಆ ಸಿಬ್ಬಂದಿ ತಮ್ಮ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆ ಕೂಡಲೇ ಆತನನ್ನು ವಿಮಾನದಿಂದ ಇಳಿಸಲಾಗಿದೆ. ಬಂಧಿತನನ್ನು ರಾಜು ಗಂಗಪ್ಪ ಎನ್ನಲಾಗಿದ್ದು, ವಿಮಾನ ನಿಲ್ದಾಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

Bengaluru man arrested for molesting IndiGo flight attendant

ರಾಜು ಗಂಗಪ್ಪನನ್ನು ಬಂಧಿಸಿದ ನಂತರ ಮುಂಬೈ ಕೋರ್ಟ್ ಮುಂದೆ ಬುಧವಾರ ಹಾಜರುಪಡಿಸಲಾಗಿದೆ. ಒಂದು ದಿನ ಪೊಲೀಸ್ ವಶಕ್ಕೆ ನೀಡಲಾಗಿದೆ. ಗುರುವಾರದಂದು ಮತ್ತೆ ಕೋರ್ಟ್ ನಿಂದ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತನಿಖೆ ಮುಂದುವರಿದಿದ್ದು, ಈ ಬಗ್ಗೆ ಇಂಡಿಗೋದಿಂದ ಹೆಚ್ಚಿನ ಪ್ರತಿಕ್ರಿಯೆ ನೀಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+