ಹೀಗೆ ಮುಂದುವರಿದರೆ ನಾನು ಜೈಲಿನಲ್ಲಿಯೇ ಸಾಯಬಹುದು: ಸ್ಟಾನ್ ಸ್ವಾಮಿ
ಮುಂಬೈ, ಮೇ 21: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತ ಹಿರಿಯ ಆದಿವಾಸಿ ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ, ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಾನು ಇಲ್ಲಿಯೇ ಸಾಯಬಹುದು. ನಾನು ಆಸ್ಪತ್ರೆಗೆ ದಾಖಲಾಗುವ ಬದಲು ಇಲ್ಲೇ ಇರುತ್ತೇನೆ ಎಂದು ಬಾಂಬೆ ಹೈಕೋರ್ಟ್‌ಗೆ ಹೇಳಿದ್ದಾರೆ.
ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿ ತಲೋಜ ಜೈಲಿನಲ್ಲಿರುವ 84 ವರ್ಷದ ಸ್ವಾಮಿ ಪಾರ್ಕಿನ್ಸನ್ಸ್ ಕಾಯಿಲೆಯಿಂದ ಬಳಲುತ್ತಿದ್ದು ಈ ಹಿನ್ನೆಲೆ ಸರ್ ಜೆಜೆ ಆಸ್ಪತ್ರೆಗೆ ದಾಖಲಿಸುವಂತೆ ಹಾಗೂ ವೈದ್ಯಕೀಯ ವರದಿಯನ್ನು ಮೇ 21ರಂದು ಸಲ್ಲಿಸುವಂತೆ ಮೇ 19ರಂದು ನಡೆದ ವಿಚಾರಣೆ ವೇಳೆ ನ್ಯಾಯಾಲಯ ಸೂಚಿಸಿತ್ತು.
ಈ ಸೂಚನೆಯಂತೆ ನೀಡಿದ ವೈದ್ಯಕೀಯ ವರದಿಯಲ್ಲಿ ಸ್ಟಾನ್ ಸ್ವಾಮಿ ಅವರಿಗೆ ತೀವ್ರ ಶ್ರವಣ ದೋಷವಿದೆ. ಸ್ವಾಮಿ ಮೈ ನಡುಗುತ್ತಿದೆ. ವಾಕಿಂಗ್ ಸ್ಟಿಕ್ ಅಥವಾ ಗಾಲಿಕುರ್ಚಿಯ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ.

ಈ ಅರ್ಜಿ ವಿಚಾರಣೆ ನಡೆಸುವ ಸಂದರ್ಭ ನ್ಯಾಯಮೂರ್ತಿಗಳಾದ ಎಸ್ ಜೆ ಕತವಲ್ಲ ಹಾಗೂ ಎಸ್ ಪಿ ತವಡೆ ಅವರ ಪೀಠದ ಮುಂದೆ ಸ್ಟಾನ್ ಸ್ವಾಮಿ ಅವರು ತಲೋಜ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ಈ ವೇಳೆ ನ್ಯಾಯಾಲಯವು ನಿಮ್ಮನ್ನು ಆಸ್ಪತ್ರೆಗೆ ದಾಖಲಿಸಬೇಕೇ ಎಂದು ಸ್ಟಾನ್ ಸ್ವಾಮಿ ಬಳಿ ಕೇಳಿದಾಗ ಸ್ಟಾನ್ ಸ್ವಾಮಿ, ಆಸ್ಪತ್ರೆಗೆ ದಾಖಲಾಗುವುದಕ್ಕೆ ನಿರಾಕರಿಸಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಾನು ಇಲ್ಲಿಯೇ ಸಾಯಬಹುದು. ಜೆಜೆ ಆಸ್ಪತ್ರೆಗೆ ದಾಖಲಾಗುವ ಬದಲು ನಾನು ಇಲ್ಲಿಯೇ ಇರುತ್ತೇನೆ ಎಂದು ಹೇಳಿದ್ದಾರೆ. ಹಾಗೆಯೇ ಮಧ್ಯಂತರ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
'ನಾನು ನನ್ನ ಕೊನೆಯ ಸಂದರ್ಭದಲ್ಲಿ ರಾಂಚಿಯಲ್ಲಿರಲು ಬಯಸುತ್ತೇನೆ. ಈಗ ನನ್ನನ್ನು ಆಸ್ಪತ್ರೆಗೆ ದಾಖಲು ಮಾಡುವುದರಿಂದ ಏನೂ ಪ್ರಯೋಜನವಾಗದು ಎಂದು ನನಗನಿಸುತ್ತಿದೆ. ನಿಧಾನವಾಗಿ ನನ್ನ ಸ್ಥಿತಿ ಶೋಚನೀಯವಾಗುತ್ತಿದೆ. ಎಂಟು ತಿಂಗಳ ಹಿಂದೆ ನಾನು ನನ್ನ ಕೆಲವು ಕೆಲಸಗಳನ್ನಾದರೂ ಮಾಡುತ್ತಿದೆ. ಊಟ ಮಾಡುತ್ತಿದ್ದೆ, ಸ್ವಲ್ಪ ಬರೆಯುತ್ತಿದ್ದೆ, ನಡೆದಾಡುತ್ತಿದ್ದೆ, ಯಾರ ಸಹಾಯ ಪಡೆಯದೆಯೇ ಸ್ನಾನ ಮಾಡುತ್ತಿದ್ದೆ, ಆದರೆ ಈಗ ಪರಿಸ್ಥಿತಿ ಬಿಗಾಡಯಿಸಿದೆ. ನನಗೆ ಬರೆಯಲು ನಡೆದಾಡಲು ಕೂಡ ಸಾಧ್ಯವಿಲ್ಲದ ಸ್ಥಿತಿಯಲ್ಲಿ ನಾನು ಇದ್ದೇನೆ. ಆಹಾರವನ್ನೂ ಯಾರಾದರು ತಿನ್ನಿಸಬೇಕಾಗಿದೆ. ಹೀಗಿರುವಾಗ ನಾನು ರಾಂಚಿಯಲ್ಲಿರಲು ಬಯಸುತ್ತೇನೆ' ಎಂದು ಹೇಳಿದ್ದಾರೆ.
'ನಾನು ನ್ಯಾಯಾಲಯದ ಮುಂದೆ ಒಂದೇ ಒಂದು ಮನವಿ ಮಾಡುತ್ತೇನೆ, ನನ್ನ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಿ. ಇದೊಂದೇ ನನ್ನ ಕೋರಿಕೆ' ಎಂದು ಮನವಿ ಮಾಡಿದ್ದಾರೆ. ಬಾಂಬೆ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಜೂನ್ 7 ಕ್ಕೆ ಮುಂದೂಡಿದೆ. (ಒನ್ಇಂಡಿಯಾ ಸುದ್ದಿ)
-
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications