ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಸಿಪಿಯಿಂದಲೂ ಸ್ಪರ್ಧೆ

ಮುಂಬೈ, ಅಕ್ಟೋಬರ್ 8: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಘೋಷಿಸಿರುವ ಎನ್‌ಸಿಪಿ, ತನ್ನ 40 ತಾರಾ ಪ್ರಚಾರಕರ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಬಿಹಾರ ವಿಧಾನಸಭೆ ಚುನಾವಣೆ ಸಂಬಂಧ ಶೀಘ್ರದಲ್ಲಿಯೇ ತನ್ನ ಸ್ಪರ್ಧೆಯ ವಿವರಗಳನ್ನು ಹಂಚಿಕೊಳ್ಳುವುದಾಗಿ ಎನ್‌ಸಿಪಿ ತಿಳಿಸಿದೆ. ಚುನಾವಣಾ ಪ್ರಚಾರದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮುಖ್ಯ ಸ್ಟಾರ್ ಕ್ಯಾಂಪೇನರ್ ಆಗಿರುತ್ತಾರೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ.

ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್‌ಸಿಪಿ ಮುಖಂಡ ನವಾಬ್ ಮಲಿಕ್, ಪಕ್ಷದ ಸಂಸದರಾದ ಪ್ರಫುಲ್ ಪಟೇಲ್, ಸುನಿಲ್ ತಟ್ಕರೆ, ಸುಪ್ರಿಯಾ ಸುಳೆ ಮತ್ತು ಫೌಜಿಯಾ ಖಾನ್ ಪಕ್ಷದ ತಾರಾ ಪ್ರಚಾರಕರಲ್ಲಿ ಸೇರಿದ್ದಾರೆ.

Bihar Assembly Election 2020: Sharad Pawars NCP To Contest In Polls

ಮಹಾರಾಷ್ಟ್ರದಲ್ಲಿ ಎನ್‌ಸಿಪಿಯ ಮಿತ್ರಪಕ್ಷವಾದ ಶಿವಸೇನಾ ಕೂಡ ತಾನು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿತ್ತು. ಸುಮಾರು 30-40 ಕ್ಷೇತ್ರಗಳಲ್ಲಿ ಅದು ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿತ್ತು. ಈಗ ಎನ್‌ಸಿಪಿ ಸ್ಪರ್ಧೆ ವಿಚಾರ ಕೂಡ ಕುತೂಹಲ ಮೂಡಿಸಿದೆ.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ-ಶಿವಸೇನಾ- ಕಾಂಗ್ರೆಸ್ ಸೇರಿ ಸರ್ಕಾರ ರಚಿಸಿವೆ. ಬಿಹಾರದಲ್ಲಿ ಈ ಮೂರೂ ಪಕ್ಷಗಳು ಜತೆಗೂಡಿ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಿಮೆ. ಏಕೆಂದರೆ ಈಗಾಗಲೇ ಕಾಂಗ್ರೆಸ್-ಆರ್‌ಜೆಡಿ ಹಾಗೂ ಇತರೆ ಪಕ್ಷಗಳನ್ನು ಒಳಗೊಂಡ ಮಹಾ ಮೈತ್ರಿಕೂಟ ನಡುವೆ ಸೀಟು ಹಂಚಿಕೆ ಒಪ್ಪಂದ ನಡೆದಿದೆ. ಹೀಗಾಗಿ ಎನ್‌ಸಿಪಿ ಮತ್ತು ಶಿವಸೇನಾ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸಿ, ನಂತರ ಸರ್ಕಾರ ರಚನೆಗೆ ಮಹಾಮೈತ್ರಿಕೂಟಕ್ಕೆ ಬೆಂಬಲ ನೀಡುವ ಸಂಭವ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+