ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೆಲ್ಲುವ ವಿಶ್ವಾಸ, ಮಹಾರಾಷ್ಟ್ರದಲ್ಲಿ ಈಗಲೇ ಸಂಭ್ರಮಾಚರಣೆಗೆ ಸಜ್ಜಾದ ಬಿಜೆಪಿ

|
Google Oneindia Kannada News

ಮುಂಬೈ, ಅಕ್ಟೋಬರ್ 24: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆಂಬ ವಿಶ್ವಾಸ ಹೊಂದಿರುವ ಬಿಜೆಪಿ ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ಸಂಭ್ರಮಾಚರಣೆಗೆ ಸಜ್ಜಾಗಿದೆ.

ಈಗಾಗಲೇ 5000 ಲಡ್ಡುಗಳಿಗೆ ಬಿಜೆಪಿ ಆರ್ಡರ್ ಕೊಟ್ಟಿದ್ದು, ಸಾಕಷ್ಟು ಹೂವಿನ ಮಾಲೆಗಳಿಗೂ ಆರ್ಡರ್ ಕೊಟ್ಟಿದೆ. ಮುಂಬೈಯಲ್ಲಿರುವ ಮಹಾರಾಷ್ಟ್ರ ಬಿಜೆಪಿ ಕೇಂದ್ರ ಕಚೇರಿಯ ಮುಂದೆ ದೊಡ್ಡ ಸ್ಕ್ರೀನ್ ಒಂದನ್ನು ಅಳವಡಿಸಿ, ಅದರಲ್ಲಿ ಫಲಿತಾಂಶವನ್ನು ಬಿತ್ತರಿಸಲು ಬಿಜೆಪಿ ಮುಂದಾಗಿದೆ.

Maharashtra and Haryana Election Results 2019 Live: ಫಲಿತಾಂಶಕ್ಕೆ ಕ್ಷಣಗಣನೆMaharashtra and Haryana Election Results 2019 Live: ಫಲಿತಾಂಶಕ್ಕೆ ಕ್ಷಣಗಣನೆ

ಬಿಜೆಪಿ ಕಾರ್ಯಕರ್ತರಿಗೆ ಬೆಳಿಗ್ಗೆ 10 ಗಂಟೆಯ ನಂತರ ಮುಂಬೈ ಕೇಂದ್ರ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಆ ಸಮಯದಲ್ಲೇ ಬಿಜೆಪಿಗೆ ಗೆಲುವಿನ ಟ್ರೆಂಡ್ ತಿಳಿಯಲಿದ್ದು, ಆಗಿನಿಂದಲೇ ಸಂಭ್ರಮಾಚರಣೆಗೆ ತೊಡಗಲು ಮುಂದಾಗಿದೆ.

BJP Confident Of Win Ordered 5000 Laddoos

ಮಹಾರಾಷ್ಟ್ರದಲ್ಲಿ ಅಕ್ಟೋಬರ್ 21 ರಂದು ಚುನಾವಣೆಯಲ್ಲಿ ಶೇ. 61.13 ರಷ್ಟು ಮತದಾನ ಪ್ರಮಾಣ ದಾಖಲಾಗಿತ್ತು.

ಕಳೆದ ಏಪ್ರಿಲ್ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಮಾಡಿಕೊಂಡಿವೆ. ಎರಡೂ ರಾಜ್ಯಗಳಲ್ಲಿ ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯ ಫಲಿತಾಂಶ ಕುತೂಹಲ ಕೆರಳಿಸಿದೆ.

Exit Poll of Polls: ಮಹಾರಾಷ್ಟ್ರ, ಹರ್ಯಾಣದಲ್ಲಿ ಬಿಜೆಪಿಗೆ ಭರ್ಜರಿ ಗೆಲುವುExit Poll of Polls: ಮಹಾರಾಷ್ಟ್ರ, ಹರ್ಯಾಣದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಈಗಾಗಲೇ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳೂ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂದಿದ್ದು, ಬಿಜೆಪಿ ಗೆಲುವು ಬಹುತೇಕ ಖಾತ್ರಿಯಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಈಗಲೇ ಸಂಭ್ರಮಾಚರಣೆಗೆ ಸಿದ್ಧರಾಗಿದ್ದಾರೆ

English summary
BJP Confident of Win in Maharashtra Assembly elections, Ordered 5000 Laddoos.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X