ಮಹಾರಾಷ್ಟ್ರದ ನೂತನ ಸಿಎಂ ದೇವೇಂದ್ರ ಫಡ್ನವೀಸ್

ಮುಂಬೈ, ಅ.28: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಗಂಗಾಧರರಾವ್ ಫಡ್ನವೀಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಇಲ್ಲಿ ವಿಧಾನ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ದೇವೇಂದ್ರ ಫಡ್ನವೀಸ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಘೋಷಿಸಿದ್ದಾರೆ.

ಹರ್ಯಾಣದ ನೂತನ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಆಯ್ಕೆ ಮಾಡಿದ್ದು ಕೂಡಾ ಮಂಗಳವಾರ(ಅ.21) ಎಂಬುದನ್ನು ಸ್ಮರಿಸಬಹುದು. ಭಾರಿ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ಸಿಎಂ ಆಯ್ಕೆ ಪ್ರಕ್ರಿಯೆ ಮಂಗಳವಾರ ಅಂತಿಮ ಹಂತ ತಲುಪಿತ್ತು. ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಮಾಡುವ ಹೊಣೆಯನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಜೆಪಿ ನಡ್ಡಾ ಅವರಿಗೆ ನೀಡಲಾಗಿತ್ತು.

Devendra Gangadharrao Fadnavis is Maharashtra CM

ಮಹಾರಾಷ್ಟ್ರ ಮುಖ್ಯಮಂತ್ರಿ ರೇಸ್‌ನಲ್ಲಿ ಪ್ರಮುಖವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ದೇವೇಂದ್ರ ಫಡ್ನವೀಸ್(44) ಮತ್ತು ದಿ.ಗೋಪಿನಾಥ್ ಮುಂಡೆ ಅವರ ಮಗಳಾದ ಪಂಕಜಾ ಮುಂಡೆ ಅವರ ಹೆಸರುಗಳ ಬಲವಾಗಿ ಕೇಳಿ ಬಂದಿತ್ತು. ಇವರಷ್ಟೇ ಅಲ್ಲದೇ ಪಕ್ಷ ಹಿರಿಯ ಮುಖಂಡರಾದ ಏಕನಾಥ್ ಖಡ್ಸೆ ಮತ್ತು ವಿನೋದ್ ತಾವ್ಡೆ ಅವರ ಹೆಸರು ಕೂಡ ಸಿಎಂ ರೇಸ್‌ನಲ್ಲಿದ್ದರು. [ಮೋದಿ ಹಾದಿ ಹಿಡಿದ 'ಲಕ್ಕಿ' ಸಿಎಂ ಖಟ್ಟರ್]

ಅಕ್ಟೋಬರ್ 15ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತದಾನ ನಡೆದು ಅ.19ರಂದು ಫಲಿತಾಂಶ ಹೊರಬಂದಿತ್ತು.288 ಸ್ಥಾನಗಳ ಪೈಕಿ ಬಿಜೆಪಿ 123 ಸ್ಥಾನಗಳನ್ನು ಗಳಿಸಿದೆ. ಇತ್ತೀಚೆಗೆ ಮುಖೇಡ್ ನ ಶಾಸಕ ಗೋವಿಂದ್ ರಾಥೋಡ್ ಅವರ ಅಕಾಲಿಕ ಸಾವಿನಿಂದಾಗಿ ಶಾಸಕರ ಸಂಖ್ಯೆ 122ಕ್ಕೆ ಕುಸಿದಿದೆ.

ಆದರೆ, ಸರಳ ಬಹುಮತಕ್ಕೆ 145 ಸೀಟುಗಳು ಅಗತ್ಯವಿದ್ದು, ಸರ್ಕಾರ ರಚನೆ ಮಾಡಲು ಬಿಜೆಪಿಗೆ ಇತರ ಪಕ್ಷಗಳ ಬೆಂಬಲ ಅನಿವಾರ್ಯವಾಗಿದೆ. ಹಳೆಯ ಮಿತ್ರ ಪಕ್ಷ ಶಿವಸೇನೆ 63 ಸ್ಥಾನ ಪಡೆದಿದ್ದು, ಇಬ್ಬರೂ ಸೇರಿಕೊಂಡು ಸರ್ಕಾರ ರಚಿಸುವ ಸಾಧ್ಯತೆ ಖಚಿತವಾಗಿದೆ. [ಮಹಾರಾಷ್ಟ್ರ, ಹರಿಯಾಣ ಫಲಿತಾಂಶ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+