ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ನೀರಿನ ಭರವಸೆ ನೀಡಿದ್ದ ಜತ್‌ನಲ್ಲಿ ಬಿಜೆಪಿ ಗೆಲುವು

|
Google Oneindia Kannada News

ಮುಂಬೈ, ಅಕ್ಟೋಬರ್ 24: ಬಿಜೆಪಿಯನ್ನು ಗೆಲ್ಲಿಸಿದರೆ ಕರ್ನಾಟಕದಿಂದ ನೀರು ಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದ ಜತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಚುನಾವಣಾ ಪ್ರಚಾರಕ್ಕೆ ಮಹಾರಾಷ್ಟ್ರಕ್ಕೆ ಹೋಗಿದ್ದ ಯಡಿಯೂರಪ್ಪ ತಮ್ಮ ಪ್ರಚಾರ ಭಾಷಣದಲ್ಲಿ, ಜತ್ ತಾಲೂಕಿನ ಹೆಚ್ಚು ಜನರು ಕನ್ನಡ ಭಾಷಿಕರು.

ಮಹಾರಾಷ್ಟ್ರಕ್ಕೆ ಕರ್ನಾಟಕದಿಂದ ನೀರು: ಯಡಿಯೂರಪ್ಪ ಭರವಸೆಮಹಾರಾಷ್ಟ್ರಕ್ಕೆ ಕರ್ನಾಟಕದಿಂದ ನೀರು: ಯಡಿಯೂರಪ್ಪ ಭರವಸೆ

ಕೃಷಿ ಮತ್ತು ಕುಡಿಯುವ ನೀರಿನ ಅಭಾವ ತೀವ್ರವಾಗಿದೆ. ಇವತ್ತು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಕ್ಕೆ ತಲುಪಿದೆ. ಈ ಗ್ರಾಮದಿಂದ 8-10 ಕಿಮೀ ದೂರದಲ್ಲಿ ಹರಿಯುತ್ತಿರುವ ಬೋರಾ ನದಿಗೆ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಹರಿಸುವುದರಿಂದ 30-40 ಗ್ರಾಮಗಳಿಗೆ 1 ಲಕ್ಷಕ್ಕೂ ಹೆಚ್ಚು ಜನರಿಗೆ ಇದರಿಂದ ಅನುಕೂಲ ಆಗುತ್ತದೆ ಎಂದು ಭರವಸೆ ನೀಡಿದ್ದರು.

BJP Wins In Jat Constituency

Recommended Video

ಕಾಂಗ್ರೆಸ್ ನಾಯಕನ ಈ ನಡೆ ನೋಡಿ ಸಿದ್ದರಾಮಯ್ಯ ಶಾಕ್ | Oneindia Kannada

ಯಡಿಯೂರಪ್ಪ ಅವರ ಈ ಹೇಳಿಕೆ ಕರ್ನಾಟಕದ ರೈತರ ಆಕ್ರೋಶಕ್ಕೆ ಕಾರಣವಾಗಿತ್ತು, ಕಳಸಾ ಬಂಡೂರಿ, ಮಹಾದಾಯಿ ವಿಚಾರದ ಕುರಿತು ಮುಖ್ಯಮಂತ್ರಿ ಭೇಟಿ ಮಾಡಲು ಹೋದರೆ ಉತ್ತರ ಕರ್ನಾಟಕದಿಂದ ನೀರು ಹರಿಸುವಂತೆ ಭರವಸೆ ನೀಡಿ ಬಂದಿದ್ದಾರೆ ಎಂದು ದೂರಿದ್ದರು.

ಇದೇ ಭಾಗದ ಮೂರು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಕೂಡ ಪ್ರಚಾರ ನಡೆಸಿದ್ದರು ಆದರೆ ಕಾಂಗ್ರೆಸ್ ಸೋತಿದೆ. ಸಿದ್ದರಾಮಯ್ಯ ಅವರು ಜತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿಕ್ರಮ್ ಸಾವಂತ್ ಪರ ಮತಯಾಚಿಸಿದ್ದರು. ಅಂದು ಸಿದ್ದರಾಮಯ್ಯ ಅವರ ಭಾಷಣ ಕೇಳಲು ಸಾವಿರಾರು ಮಂದಿ ಸಭೆ ಸೇರಿದ್ದರು.

Election Results 2019 Live: ಹರ್ಯಾಣದಲ್ಲಿ ಸೋಲು, ಬಿಜೆಪಿ ಅಧ್ಯಕ್ಷ ರಾಜೀನಾಮೆElection Results 2019 Live: ಹರ್ಯಾಣದಲ್ಲಿ ಸೋಲು, ಬಿಜೆಪಿ ಅಧ್ಯಕ್ಷ ರಾಜೀನಾಮೆ

ನಿಮಗೆ ಯಾವ ರೀತಿ ಅನುಕೂಲ ಮಾಡಲು ಸಾಧ್ಯ ಇದೆಯೋ, ಚರ್ಚೆ ಮಾಡಿ ಸಹಕಾರ ಕೊಡುತ್ತೇನೆ. ಯಡಿಯೂರಪ್ಪ ಬಂದಿದ್ದಕ್ಕೆ, ಇಲ್ಲಿ ಮಾತನಾಡಿದ್ದಕ್ಕೆ ಹಿಂದಿನ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಡಬೇಕು ಎಂದು ಮತದಾರರಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದರು.

ನಮ್ಮ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಹಾರಾಷ್ಟ್ರ ಸಿಎಂ ಘಡ್ನವೀಸ್ ಜೊತೆಗೂ ಚರ್ಚೆ ಮಾಡುತ್ತೇನೆ. ಮಹಾರಾಷ್ಟ್ರ ಬೇರೆ, ಕರ್ನಾಟಕ ಬೇರೆಯಲ್ಲ. ನೀರಿಲ್ಲದಿದ್ದರೆ ಬದುಕಲು ಆಗಲ್ಲ.

ರೈತರ ಹೊಲಕ್ಕೆ ನೀರು ಬೇಕು, ರೈತರ ಬೆಳೆದಂತಹ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕು. ರೈತರ ಉತ್ಪನ್ನ 2 ಪಟ್ಟು ಹೆಚ್ಚಾಗಬೇಕು ಅಂತಾ ಪ್ರಧಾನಿ ಮೋದಿ ಅಪೇಕ್ಷೆ ಇದೆ. ಇದನ್ನು ಪೂರೈಸಲು ನಮ್ಮ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ ಎಂದಿದ್ದರು.

ಇದೀಗ ಯಡಿಯೂರಪ್ಪ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳುತ್ತಾರಾ ಎನ್ನುವ ಕುತೂಹಲ ಮೂಡಿದೆ.

English summary
BJP Wins In Jat Constituency, Yediyurappa Promised Earler that If BJP wins provide water to Jat from Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X