ಮಹಾರಾಷ್ಟ್ರದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಇದುವರೆಗೆ 52 ಮಂದಿ ಬಲಿ
ಮುಂಬೈ, ಮೇ 14: ಬ್ಲ್ಯಾಕ್ ಫಂಗಸ್ ಹಾವಳಿ ದೇಶದಲ್ಲಿ ಉಲ್ಬಣಗೊಂಡಿದ್ದು, ಮಹಾರಾಷ್ಟ್ರದಲ್ಲಿ ಇದುವರೆಗೆ 52 ಮಂದಿ ಮೃತಪಟ್ಟಿದ್ದಾರೆ.
Recommended Video
ಕೊರೊನಾ ಸೋಂಕಿತರು ಆಸ್ಪತ್ರೆಗಳಲ್ಲಿ ಹೆಚ್ಚು ಕಾಲ ಉಳಿದರೆ ಅಥವಾ ಸೋಂಕಿನಿಂದ ಗುಣಮುಖರಾದ ಬಳಿಕ ಮಲಿನ ಪರಿಸರದಲ್ಲಿ ವಾಸಮಾಡುತ್ತಿದ್ದರೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳಲಿದೆ.
ಪ್ರಸ್ತುತ ಸಾವನ್ನಪ್ಪಿರುವ ಈ 52 ಮಂದಿಯೂ ಕೊರೊನಾ ಸೋಂಕಿಗೊಳಗಾಗಿ ಚೇತರಿಸಿಕೊಂಡವರೇ ಆಗಿದ್ದರೆಂದು ಆಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಗುಲಿದವರ ಚಿಕಿತ್ಸೆಗೆ ಬಹುಶಿಸ್ತೀಯ ವಿಧಾನದ ಅಗತ್ಯವಿರುತ್ತದೆ, ಇದರಿಂದ ಆರೋಗ್ಯದ ಮೂಲಸೌಕರ್ಯಗಳ ಮೇಲೆ ಮತ್ತಷ್ಟು ಹೊರೆ ಬೀಳುವ ಸಾಧ್ಯತೆಗಳಿವೆ.
ಪರಿಸ್ಥಿತಿ ನಿಭಾಯಿಸಲು ಈಗಾಗಲೇ 1 ಲಕ್ಷ ಡೋಸ್ ಗಳ ಆಂಫೊಟೆರಿಸಿನ್ ಬಿ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರ ಮೇಲೆ ಈದು ಅತ್ಯಂತ ಗಂಭೀರ ಪರಿಣಾಮ ಬೀರುತ್ತಿದೆ ಎಂದು ತೋಪೆ ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೋಗಿಗಳಲ್ಲಿ ಅತೀವ್ರ ಜ್ವರ, ಕಣ್ಣಿನ ನೋವು, ಮೂಗು ಕಟ್ಟುವುದು, ಕಣ್ಣಿನ ದೃಷ್ಠಿ ಭಾಗಶಃ ನಷ್ಟಗೊಂಡಿರುವ ಲಕ್ಷಣಗಳು ಕಂಡುಬಂದಿವೆ.
ಈ ನಡುವೆ ಇದೇ ಮೊದಲ ಬಾರಿಗೆ ಮಹಾರಾಷ್ಟ್ರ ಆರೋಗ್ಯ ಸಚಿವಾರ ಬ್ಲ್ಯಾಕ್ ಫಂಗಸ್‌ನಿಂದ ಸಾವನ್ನಪ್ಪಿದ್ದವರ ಕುರಿತಂತೆಯು ಪ್ರತ್ಯೇಕವಾಗಿ ಮಾಹಿತಿ ನೀಡಲು ಆರಂಭಿಸಿದೆ.
ಬುಧವಾರವಷ್ಟೇ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆಯವರು, ರಾಜ್ಯದಲ್ಲಿ ಈ ವರೆಗಲೂ 1,500 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಕೊರೊನಾ 2ನೇ ಅಲೆ ವೇಳೆ ತೀವ್ರಗೊಂಡಿದೆ ಎಂದು ಹೇಳಿದ್ದಾರೆ.












Click it and Unblock the Notifications