ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಕೊಳಗೇರಿ ಪ್ರದೇಶದಲ್ಲಿ ಮತ್ತೊಂದು ಕೊರೊನಾ ಪ್ರಕರಣ ದಾಖಲು!

|
Google Oneindia Kannada News

ಮುಂಬೈ, ಏಪ್ರಿಲ್ 2: ಏಷ್ಯಾದ ಅತಿ ದೊಡ್ಡ ಕೊಳಗೇರಿ ಪ್ರದೇಶವಾದ ಮುಂಬೈನ ಧಾರಾವಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ ಬೆನ್ನಲ್ಲೇ ಮತ್ತೋರ್ವನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬಿಎಂಸಿ (ಬೃಹನ್ಮುಂಬೈ ಮುನಿಸಿಪಲ್ ಕಾರ್ಪೊರೇಷನ್) ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಲ್ಲಿ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ. ಮುಂಬೈನ ವರ್ಲಿ ಸ್ಲಂ ನಿವಾಸಿ 52 ವರ್ಷ ವ್ಯಕ್ತಿ ಧಾರಾವಿ ಕೊಳಗೇರಿಯಲ್ಲಿ ಕ್ಲೀನಿಂಗ್ ಕೆಲಸ ನಿರ್ವಹಿಸುತ್ತಿದ್ದರು.

ಏಷ್ಯಾದ ಅತಿ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಕೊರೊನಾದಿಂದ ವ್ಯಕ್ತಿ ಸಾವು!ಏಷ್ಯಾದ ಅತಿ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಕೊರೊನಾದಿಂದ ವ್ಯಕ್ತಿ ಸಾವು!

ಪ್ರವಾಸದ ಹಿನ್ನಲೆ ಹೊಂದಿಲ್ಲದ ಈ ವ್ಯಕ್ತಿಗೆ ಸೋಂಕು ತಗುಲಿದ್ದು ಹೇಗೆ ಎಂಬುದಿನ್ನೂ ಪ್ರಶ್ನೆಯಾಗೇ ಉಳಿದಿದೆ. ಧಾರಾವಿಯಲ್ಲಿ ಕ್ಲೀನಿಂಗ್ ಮಾಡುವಾಗ ಸೋಂಕು ತಗುಲಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ, ಸೋಂಕಿತ ವ್ಯಕ್ತಿಯ ಜೊತೆ ಕೆಲಸ ಮಾಡುತ್ತಿದ್ದವರನ್ನು ಹೋಮ್ ಕ್ವಾರಂಟೈನ್ ನಲ್ಲಿರಿಸಲಾಗಿದೆ.

BMC Sanitation Worker is 2nd COVID 19 Case in Mumbais Dharavi

ಇಲ್ಲಿಯವರೆಗೂ ಮಹಾರಾಷ್ಟ್ರದಲ್ಲಿ 335 ಕೊರೊನಾ ವೈರಸ್ ಕೇಸ್ ಗಳು ದಾಖಲಾಗಿವೆ. ಇದೀಗ ಮುಂಬೈನ ಕೊಳಗೇರಿ ಪ್ರದೇಶಗಳಿಗೂ ಕೊರೊನಾ ವೈರಸ್ ಸೋಂಕು ತಗುಲಿರುವುದರಿಂದ, ಅಲ್ಲಿ ನೆಲೆಸಿರುವ ಲಕ್ಷಾಂತರ ಮಂದಿ ಆತಂಕಕ್ಕೀಡಾಗಿದ್ದಾರೆ.

English summary
BMC Sanitation Worker is 2nd COVID 19 Case in Mumbai's Dharavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X