ಮಹಿಳೆ ಮೇಲೆ ಹಲ್ಲೆ, ನಟ ನವಾಜುದ್ದೀನ್ ಸಿದ್ದಿಕಿ ಮೇಲೆ ಕೇಸ್
ಮುಂಬೈ, ಜ. 18: ಪ್ರತಿಭಾವಂತ ನಟ ನವಾಜುದ್ದೀನ್ ಸಿದ್ದಿಕಿ ಅವರ ಮೇಲೆ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಆರೋಪ ಮಾಡಲಾಗಿದೆ. ಈ ಕುರಿತಂತೆ ಪ್ರಕರಣ ದಾಖಲಿಸಲಾಗಿದ್ದು, ಎಫ್ ಐಆರ್ ಹಾಕಲಾಗಿದೆ.
ಕಾರು ಪಾರ್ಕಿಂಗ್ ತಾಣದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ, ಹಲ್ಲೆ ಆರೋಪ ಎದುರಿಸುತ್ತಿದ್ದಾರೆ. ಆದರೆ, ಇಂಥ ಘಟನೆ ಏನೂ ನಡೆದಿಲ್ಲ. ಸುಮ್ಮನೆ ಚಿಕ್ಕ ವಿಷಯವನ್ನು ದೊಡ್ಡದ್ದು ಮಾಡಬೇಡಿ ಎಂದು ಸಿದ್ದಿಕಿ ಅವರ ಮ್ಯಾನೇಜರ್ ಅನೂಪ್ ಪಾಂಡೆ ಅವರು ಮಾಧ್ಯಮಗಳ ವರದಿಯನ್ನು ಅಲ್ಲಗೆಳೆದಿದ್ದಾರೆ.

ಘಟನೆ ವಿವರ: ದ್ವಿಚಕ್ರ ವಾಹನ ನಿಲುಗಡೆ ಇರುವ ಕಡೆ ಕಾರು ನಿಲ್ಲಿಸಿದ್ದನ್ನು 24 ವರ್ಷ ವಯಸ್ಸಿನ ಮಹಿಳೆ ಪ್ರಶ್ನಿಸಿದ್ದಾರೆ. ಇದರಿಂದ ಸಿದ್ದಿಕಿ ಹಾಗೂ ಮಹಿಳೆ ನಡುವೆ ಮಾತಿನ ಚಕಮಕಿ ನಡೆದಿದೆ.
ಆದರೆ, ದೂರು ನೀಡಿರುವ ಮಹಿಳೆ ಹೇಳಿದಂತೆ ಹಲ್ಲೆ ಮಾಡೀಲ್ಲ ಎಂದು ಪಾಂಡೆ ಸ್ಪಷ್ಟಪಡಿಸಿದ್ದಾರೆ. ತನಿಖೆ ಮಾಡದೆ ದೂರು ದಾಖಲಿಸಿಕೊಂಡು ಎಫ್ಐಆರ್ ಹಾಕಲಾಗಿದೆ.
ದೂರಿನ ಪ್ರಕಾರ ಸಿದ್ದಿಕಿ ಅವರು ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಅಂಧೇರಿಯ ಸಬ್ ಅರ್ಬನ್ ಪ್ರದೇಶದ ಯಾರಿ ರಸ್ತೆಯಲ್ಲಿ ಕುಟುಂಬದೊಡನೆ ನೆಲೆಸಿರುವ ಸಿದ್ದಿಕಿ ಅವರ ಜೊತೆ ಈ ಹಿಂದೆ ಕೂಡಾ ಪಾರ್ಕಿಂಗ್ ವಿಷಯಕ್ಕೆ ಜಗಳವಾಡಿದ ವರದಿಗಳಿವೆ. ಆದರೆ, ಈ ಬಾರಿ ಸಿದ್ದಿಕಿ ವಿರುದ್ಧ ಐಪಿಸಿ ಸೆಕ್ಷನ್ 354 ಅನ್ವಯ ಪ್ರಕರಣ ದಾಖಲಿಸಿಕೊಂಡಿದೆ.
(ಒನ್ ಇಂಡಿಯಾ ಸುದ್ದಿ)
-
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications