3 ರೈಲ್ವೆ ನಿಲ್ದಾಣ, ಅಮಿತಾಭ್ ಬಚ್ಚನ್ ಬಂಗಲೆಗೆ ಬಾಂಬ್ ಬೆದರಿಕೆ ಕರೆ
ಮುಂಬೈ, ಆಗಸ್ಟ್ 07: ಮುಂಬೈನ 3 ರೈಲ್ವೆ ನಿಲ್ದಾಣಗಳು ಹಾಗೂ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಬಂಗಲೆಗೆ ಬಾಂಬ್ ಇಟ್ಟಿರುವ ಕುರಿತು ಬೆದರಿಕೆ ಕರೆ ಬಂದಿರುವ ಘಟನೆ ನಡೆದಿದೆ.
ಬಾಂಬ್ ಇಟ್ಟಿರುವ ಬಗ್ಗೆ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈನ ಮೂರು ಪ್ರಮುಖ ರೈಲ್ವೆ ನಿಲ್ದಾಣಗಳು ಮತ್ತು ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಬಂಗಲೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಲ್ಕೂ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಶೋಧ ನಡೆಸಿದೆಯಾದರೂ ಅನುಮಾನಾಸ್ಪದವಾದ ಯಾವ ವಸ್ತುಗಳೂ ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಕರೆ ಬಂದ ಬಳಿಕ ರೈಲ್ವೆ ಪೊಲೀಸರು, ರೈಲ್ವೆ ಭದ್ರತಾ ದಳ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನದಳ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

ಇದುವರೆಗೆ ಅನುಮಾನಾಸ್ಪದವಾದ ಯಾವ ವಸ್ತುಗಳೂ ಕಂಡುಬಂದಿಲ್ಲ, ಆದರೆ ಅಲ್ಲಿ ಭಾರಿ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ರಾತ್ರಿ ಕರೆ ಬಂದಿತ್ತು, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್, ಬೈಕುಲ್ಲಾ, ದಾದರ್ ರೈಲ್ವೆ ನಿಲ್ದಾಣ ಮತ್ತು ನಟ ಅಮಿತಾಬ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್ ಇರಿಸಿರುವುದಾಗಿ ಕರೆ ಮಾಡಿದವರು ಹೇಳಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವಾಣಿಜ್ಯ ನಗರಿ ಮುಂಬೈನ ಮೂರು ಪ್ರಮುಖ ರೈಲು ನಿಲ್ದಾಣಗಳು ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಕಳೆದ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿರುವ ಅನಾಮಿಕ ವ್ಯಕ್ತಿ, ಜುಹುನಲ್ಲಿರುವ ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮುಂಬೈನ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ತಿಳಿಸಿದ್ದಾರೆ.
ಕೂಡಲೇ ಎಚ್ಚೆತ್ತ ಮುಂಬೈ ಪೊಲೀಸರು ಕರೆಯನ್ನಾಧರಿಸಿ ಹುಡುಕಾಟ ನಡೆಸಿದರಾದರೂ ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿತ್ತು.
ಕಳೆದ ರಾತ್ರಿ ಕರೆ ಮಾಡಿದ್ದ ವ್ಯಕ್ತಿಗಳು, ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್, ದಾದಲ್ ಹಾಗೂ ಬೈಕುಲ್ಲಾ ರೈಲ್ವೇ ನಿಲ್ದಾಣ, ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಇದರಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಮುಂಬೈ ಪೊಲೀಸರ ಮುಖ್ಯ ಕಂಟ್ರೋಲ್ ರೂಂಗೆ ಶುಕ್ರವಾರ ರಾತ್ರಿ ಫೋನ್ ಕರೆಯೊಂದು ಬಂದಿತ್ತು. ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣ, ಬೈಕುಲ್ಲಾ ಮತ್ತು ದಾದರ್ ರೈಲು ನಿಲ್ದಾಣಗಳಲ್ಲಿ ಹಾಗೂ ಜುಹುನಲ್ಲಿರುವ ಅಮಿತಾಬ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಕರೆ ಮಾಡಿದಾತ ಹೇಳಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಉನ್ನತ ಮಟ್ಟದ ಅಧಿಕಾರಿಯೊಬ್ಬರು, ಬೆದರಿಕೆ ಕರೆ ಬಂದ ತಕ್ಷಣವೇ ರೈಲ್ವೇ ಪೊಲೀಸ್, ರೈಲ್ವೇ ರಕ್ಷಣಾ ಸಿಬ್ಬಂದಿ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಕ್ಕೆ ಮಾಹಿತಿ ನೀಡಿದೆವು. ಶ್ವಾನದಳ ಹಾಗೂ ಸ್ಥಳೀಯ ಪೊಲೀಸರು ಕೂಡಾ ತಕ್ಷಣವೇ ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರು ಎಂದು ಹೇಳಿದ್ದಾರೆ.
ಯಾವ ಸ್ಥಳಗಳಲ್ಲೂ ಅನುಮಾನಸ್ಪದ ವಸ್ತು ಅಥವಾ ಸ್ಫೋಟಕ ಇಟ್ಟ ಕುರುಹು ಕಂಡುಬಂದಿಲ್ಲವಾದರೂ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.












Click it and Unblock the Notifications