ದೀಪಾವಳಿ: ಮಹಾರಾಷ್ಟ್ರದಲ್ಲೂ ಪಟಾಕಿ ಮಾರುವಂತಿಲ್ಲ
ಮುಂಬೈ, ಅಕ್ಟೋಬರ್ 11 : ಬೆಳಕಿನ ಹಬ್ಬವೆಂದೇ ಆಚರಿಸಲ್ಪಡುವ ದೀಪಾವಳಿಯನ್ನು ಮಾಲಿನ್ಯ ಮುಕ್ತವಾಗಿ ಆಚರಿಸುವ ಉದ್ದೇಶದಿಂದ ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧಿಸಿದ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲೂ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಮಹಾರಾಷ್ಟ್ರದ ವಸತಿ ಪ್ರದೇಶಗಳಲ್ಲಿ ಪಟಾಕಿಗಳ ಮಾರಾಟಕ್ಕೆ ನಿಷೇಧಿಸಿ ಮಂಗಳವಾರ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. ನವದೆಹಲಿಯಲ್ಲೂ ನವೆಂಬರ್ 1 ವರೆಗೂ ಪಟಾಕಿ ಮಾರಾಟವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.

ಛತ್ತೀಸ್ ಗಡದಲ್ಲೂ ಸಹ ಪಟಾಕಿಗಳ ಮೇಲೆ ನಿಷೇಧ ಹೇರಿದೆ. ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಯೋಗ್ಯವಾದ ಸ್ಥಳಗಳಲ್ಲಿ ಮಾತ್ರವೇ ಪಟಾಕಿ ಮಾರಲು ಅವಕಾಶ ನೀಡಬೇಕು' ಎಂದು ಹೈಕೋರ್ಟ್ ಆದೇಶಿಸಿದೆ.
ಬೆಳಕಿನ ಹಬ್ಬವೆಂದೇ ಆಚರಿಸಲ್ಪಡುವ ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಿದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇದಕ್ಕೆ ಕೋಮು ಬಣ್ಣ ಪಡೆದುಕೊಂಡು ಪರ ವಿರೋಧದ ಚರ್ಚೆಗೆ ಕಾರಣವಾಗಿದೆ.
ಮಾಲಿನ್ಯ ತಡೆಗಟ್ಟುವ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಪಟಾಕಿ ಮಾರಟವನ್ನು ನಿಷೇಧಿಸಬೇಕಾ?. ನಿಮ್ಮ ಅಭಿಪ್ರಾಯಗಳನ್ನು ಕೆಳಗಿನ ಕಾಮೆಂಟ್ ಬಾಕ್ಸ್ ನಲ್ಲಿ ಹಂಚಿಕೊಳ್ಳಿ.












Click it and Unblock the Notifications