ಭೀಮಾ ಕೋರೆಗಾಂವ್ ಪ್ರಕರಣ: ಸುಧಾ ಭಾರದ್ವಾಜ್‌ಗೆ ಜಾಮೀನು
ಮುಂಬೈ, ಡಿಸೆಂಬರ್ 01: ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್ ಜೆ ಜಾಮ್‌ದಾರ್ ಅವರಿದ್ದ ಪೀಠ, ಸುಧಾ ಅವರಿಗೆ ಮಾತ್ರ ಜಾಮೀನು ಮಂಜೂರು ಮಾಡಿದೆ. ಪುಣೆಯ ಸೆಷನ್ಸ್ ನ್ಯಾಯಾಧೀಶರಾದ ಕೆ ಡಿ ವದನೆ ಮತ್ತು ಆರ್ ಎಂ ಪಾಂಡೆ ಅವರು ಪ್ರಕರಣದಲ್ಲಿ ಆದೇಶಗಳನ್ನು ಹೊರಡಿಸಲು ಯಾವುದೇ ಅಧಿಕಾರ ವ್ಯಾಪ್ತಿ ಹೊಂದಿಲ್ಲ ಎಂಬ ಕಾರಣಕ್ಕಾಗಿ ಅಪರಾಧ ಪ್ರಕ್ರಿಯಾ ಸಂಹಿತೆಯಡಿಯಲ್ಲಿ ಸುಧಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯ ಜಾಮೀನು ನೀಡಿತು. ಆರೋಪಪಟ್ಟಿಯನ್ನು ಪರಿಗಣಿಸಿ ಸಿಆರ್‌ಪಿಸಿ ಸೆಕ್ಷನ್ 167 (2)ರ ಅಡಿ ಡಿಫಾಲ್ಟ್ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
ಆಗಸ್ಟ್ 2018ರಿಂದ ಸುಧಾ ಜೈಲಿನಲ್ಲಿದ್ದು ಅವರನ್ನು ದೆಹಲಿಯಲ್ಲಿ ಬಂಧಿಸಿ ಮುಂಬೈಗೆ ಕರೆದೊಯ್ಯಲಾಗಿತ್ತು. ಛತ್ತೀಸ್‌ಗಢದಲ್ಲಿ ಬುಡಕಟ್ಟು ಸಮುದಾಯ ಹಾಗೂ ಇತರರ ಹಕ್ಕುಗಳಿಗಾಗಿ ಕೆಲಸ ಮಾಡಿದ ಸುಧಾ ಅವರು ತಮ್ಮ ಬಂಧನ ನಡೆದಾಗ ದೆಹಲಿಯ ಪ್ರತಿಷ್ಠಿತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಬೋಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸುಧಾ ಅವರ ಬಂಧನಕ್ಕೂ ಮುನ್ನ ಈ ಪ್ರಕರಣದಲ್ಲಿ ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು.

ಜನವರಿ 1, 1818 ರಂದು ದಲಿತರು ಮತ್ತು ಮರಾಠರ ನಡುವೆ ನಡೆದ ಗಲಭೆಯೇ ಭೀಮಾ ಕೊರೆಗಾಂವ್ ಗಲಭೆ. ಕೊರೆಗಾಂವ್ ಎಂಬ ಹಳ್ಳಿ ಭೀಮಾ ನದಿ ತೀರದಲ್ಲಿದೆ. ಈ ಪ್ರದೇಶದಲ್ಲಿ ಯುದ್ಧ ನಡೆದಿದ್ದರಿಂದ ಅದಕ್ಕೆ ಭೀಮಾ ಕೊರೆಗಾಂವ್ ಎಂಬ ಹೆಸರು. ಇದರ 200 ವರ್ಷಾಚರಣೆ ಡಿಸೆಂಬರ್(2017) -ಜನವರಿಯಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಮರಾಠರ ವಿರುದ್ಧ ಯುದ್ಧ ಗೆದ್ದ ದಿನವನ್ನು, 'ವಿಜಯ ದಿವಸ' ಎಂಬ ಹೆಸರಿನಲ್ಲಿ ದಲಿತರು ಆಚರಿಸುತ್ತಿದ್ದರು. ಆದರೆ ಆಚರಣೆಯ ಸಂದರ್ಭ ದಲ್ಲಿ ಇದ್ದಕ್ಕಿದ್ದಂತೆ ಘರ್ಷಣೆ ಉಂಟಾಗಿ, ದಲಿತ ಯುವಕನೋರ್ವ ಮೃತಪಟ್ಟಿದ್ದ. ಇದರಿಂದ ಈ ಘರ್ಷಣೆ ಉಗ್ರರೂಪ ಪಡೆದು, ಸಾಕಷ್ಟು ಜನರಿಗೆ ಗಾಯವಾಗಿತ್ತು. ನಂತರ ಮಹಾರಾಷ್ಟ್ರ ಬಂದ್ ಸಹ ಆಚರಿಸಲಾಗಿತ್ತು.
ಮಾವೋ ಸಿದ್ಧಾಂತಗಳ ಅನುಯಾಯಿಗಳಾದ ಕೆಲವು ವಿಚಾರವಾದಿಗಳ ಕೈವಾಡವೂ ಈ ಗಲೆಭೆಯಲ್ಲಿದೆ ಎಂಬ ಮಾಹಿತಿ ಮಹಾರಾಷ್ಟ್ರ ಪೊಲಿಸರಿಗೆ ಲಭ್ಯವಾದ ಪರಿಣಾಮ UAPA(Unlawful Activities Prevention Act) ಕಾಯ್ದೆಯ ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಈ ಕಾಯ್ದೆಯ ಪ್ರಕಾರ ಯಾವುದೇ ವಾರೆಂಟ್ ನ ಅಗತ್ಯವಿಲ್ಲದೆ ವ್ಯಕ್ತಿಯ ಮನೆಯಲ್ಲಿ ತನಿಖೆ ನಡೆಸಬಹುದು. ಈ ಕಾಯ್ದೆಯಡಿಯಲ್ಲೇ ದೂರು ದಾಖಲಿಸಿ ವಿಚಾರವಾದಿಗಳ ಮನೆಯಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿರುವ ಮಾಹಿತಿಗಳನ್ನೊಳಗೊಂಡ ಎರಡು ಪತ್ರಗಳು ಪೊಲೀಸರಿಗೆ ಲಭಿಸಿತ್ತು. ಈ ಪತ್ರದಲ್ಲಿ, ಮಾವೋವಾದಿಗಳೇ ರಾಜೀವ್ ಗಾಂಧಿ ಹತ್ಯೆಯ ಮಾದರಿಯಲ್ಲಿಯೇ ಮೋದಿ ಹತ್ಯೆಗೂ ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದ್ದರಿಂದ ಮಾವೋ ಸಿದ್ಧಾಂತವನ್ನು ಅನುಸರಿಸುವವರ ಮೇಲೆ ಒಂದು ಕಣ್ಣಿಡಲು ಪೊಲೀಸರು ಚಿಂತಿಸಿದ್ದರು.

ಹೈದರಾಬಾದ್, ಮುಂಬೈ, ಫರಿದಾಬಾದ್, ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಏಕಕಾಲದಲ್ಲಿ ಪೊಲಿಸರು ದಾಳಿ ನಡೆಸಿದ್ದಾರೆ. ಆದರೆ ವಿಚಾರವಾದಿಗಳ ಬಂಧನವನ್ನು ಹಲವರು ಕಟು ಶಬ್ದಗಳಿಂದ ಟೀಕಿಸಿದ್ದು, ಭಾರತದಲ್ಲಿ ಇದೀಗ ತುರ್ತುಪರಿಸ್ಥಿತಿ ಘೋಷಣೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ. ಬಂಧನಕ್ಕೆ ಸಂಬಂಧಿಸಿದ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಮುಂದುವರೆದಿದೆ.
2018ರ ಜನವರಿ 1ರಂದು ಭೀಮಾ-ಕೋರೆಗಾಂವ್ ಯುದ್ಧದ 200ನೇ ವರ್ಷದ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಒಬ್ಬ ಮೃತಪಟ್ಟು, 30 ಪೊಲೀಸರು ಗಾಯಗೊಂಡಿದ್ದ ಘಟನೆ ಸಂಬಂಧಿಸಿದಂತೆ ಆರೋಪದ ಮೇಲೆ ಹನಿ ಬಾಬು, ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ, ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ, ಗೋವಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಪ್ರಾಧ್ಯಾಪಕ ಆನಂದ್ ತೇಲ್ತುಂಬ್ಡೆ, ಜ್ಯೋತಿ ಜಗ್ತಾಪ್, ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಾವೋವಾದಿ ಚಟುವಟಿಕೆಗಳನ್ನ ನಡೆಸಲು ಮಾವೋವಾದಿ ಕಾರ್ಯಕರ್ತರ ಪಡೆ ಹಾಗೂ ಬೆಂಬಲಿಗರ ಮಧ್ಯೆ ಇರುವ ಹಣಕಾಸು ವ್ಯವಸ್ಥೆ ಕೂಡ ಅನಾವರಣಗೊಂಡಿದೆ" ಎಂದು ತನ್ನ ಚಾರ್ಜ್ಶೀಟ್ನಲ್ಲಿ ಎನ್ಐಎ ಆರೋಪಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications