Breaking News :ಮುಂಬೈನ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ಬೆಂಕಿ

ಮುಂಬೈ ನವೆಂಬರ್ 15: ಮುಂಬೈ ಉಪನಗರ ಕಂಜುರ್ಮಾರ್ಗ್‌ನಲ್ಲಿರುವ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ಇಂದು ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ. ಎಂಟು ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್‌ಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಧಾವಿಸಿವೆ.

ಮುಗಿಲೆತ್ತರಕ್ಕೆ ಅಗ್ನಿಯ ಕೆನ್ನಾಲಿಗೆ ಚಾಚಿಕೊಂಡಿದ್ದು ದಟ್ಟವಾದ ಹೊಗೆ ಆವರಿಸಿದೆ. ಬೆಂಕಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

Breaking News: Fire At Samsung Service Centre In Mumbai

ರಾತ್ರಿ 9.42ಕ್ಕೆ ಕಟ್ಟಡದ 2ನೇ ಮಹಡಿಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಅದನ್ನು ರಾತ್ರಿ 11 ರ ಹೊತ್ತಿಗೆ ಮೂರನೇ ಮಹಡಿಗೆ ಹಬ್ಬಿದ್ದು, ಬೆಂಕಿ ತೀವ್ರತೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.



ಉರಿಯುತ್ತಿರುವ ಜ್ವಾಲೆಗಳ ನಡುವೆ ಮುಂಬೈನ ಕಟ್ಟಡ ಕಾಣುತ್ತಿದ್ದು, ಸುತ್ತಲೂ ಹೊಗೆಯ ಮೋಡವು ಏರುತ್ತಿರುವ ದೃಶ್ಯಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಬೆಂಕಿ ಕಾಣಿಸಿಕೊಂಡಿದ್ದು ಹೇಗೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ವಾರ್ಡ್ ಮಟ್ಟದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಲು ನೆರವಾಗುತ್ತಿದ್ದಾರೆ.

"ಜ್ವಾಲೆಯನ್ನು ನಂದಿಸಲು ಪ್ರಯತ್ನಿಸಲಾಗುತ್ತಿದೆ, ಸದ್ಯಕ್ಕೆ ಯಾರಿಗೂ ಗಾಯಗಳ ಬಗ್ಗೆ ವರದಿಯಾಗಿಲ್ಲ" ಎಂದು ಪ್ರತ್ಯಕ್ಷದರ್ಶಿಗಳು ಪಿಟಿಐಗೆ ತಿಳಿಸಿದ್ದಾರೆ.

ಬಹುರಾಷ್ಟ್ರೀಯ ಎಲೆಕ್ಟ್ರಾನಿಕ್ ಸರಕುಗಳ ಕಂಪನಿಯ ಸೇವಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಆದರೆ ಅದರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+