• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ

|
Google Oneindia Kannada News

ಮುಂಬೈ , ಆಗಸ್ಟ್ 15: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿದ್ದು, ಶಂಕಿತನ್ನು ವಶಕ್ಕೆ ಪಡೆಯಲಾಗಿದೆ.

ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್‌ಲೈನ್ ಸಂಖ್ಯೆಗೆ ಇಂದು ಬೆಳಗ್ಗೆ ಅಫ್ಜಲ್ ಎಂದು ಗುರುತಿಸಲಾದ ವ್ಯಕ್ತಿ ಮೂರು-ನಾಲ್ಕು ಕರೆಗಳನ್ನು ಮಾಡಿ, ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು.

ಬೆದರಿಕೆ ಕರೆಗಳನ್ನು ಸ್ವೀಕರಿಸಿದ ಬಗ್ಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ದೂರು ದಾಖಲಿಸಿತ್ತು. ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗಿತ್ತು. ಕರೆ ಮಾಡಿದ ಫೋನ್ ಸಂಖ್ಯೆಯನ್ನು ಪೊಲೀಸರು ಗುರುತಿಸಿದ ನಂತರ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಕರೆ ಮಾಡಿದ ಶಂಕಿತ ಆರೋಪಿ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ವ್ಯಕ್ತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

English summary
Threat Calls To Reliance Industries Ltd (RIL) chairman Mukesh Ambani and his family, man taken into custody by Mumbai police. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X