ಮುಂಬೈನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ, 3 ಸಾವು

Posted By:
Subscribe to Oneindia Kannada

ಮುಂಬೈ, ಡಿಸೆಂಬರ್ 15: ಇಲ್ಲಿನ ಮಹಾರಾಷ್ಟ್ರನಗರ (ಮನ್ ಖುರ್ದ್) ದಲ್ಲಿ ಗುರುವಾರ ಬೆಳಗ್ಗೆ ಮನೆಯೊಂದು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಎರಡು ಅಗ್ನಿಶಾಮಕ ದಳ ಮತ್ತು ಒಂದು ಆಂಬುಲೆನ್ಸ್ ಘಟನಾ ಸ್ಥಳಕ್ಕೆ ತಕ್ಷಣವೇ ಧಾವಿಸಿ ಬಂದಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರೆ, 13 ಮಂದಿಯನ್ನು ರಕ್ಷಿಸಲಾಗಿದೆ.

Building collapse in Mankhurd, Mumbai kills 3, injures 12

ಮುಂಬೈನ ಬೊರಿವಿಲಿಯ ಪೂರ್ವಭಾಗದಲ್ಲಿರುವ ಈ ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವವರ ರಕ್ಷಣೆ ಸಾಗಿದೆ. ಇದೊಂಡು ಹಳೆ ಕಟ್ಟಡವಾಗಿದ್ದು, ಶಿಥಿಲಗೊಂಡಿತ್ತು ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ.

ಆದರೆ, ಕಟ್ಟಡ ಕುಸಿತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೃಹನ್ ಮುಂಬೈ ಮಹಾನಗರ ಪಾಲಿಕೆ ಈ ಬಗ್ಗೆ ಪರಿಶೀಲನೆ ನಡೆಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Atlease 3 people were killed and 13 were left severely injured in the house collapse in Maharsahstra Nagar (Mankhurd), Mumbai on Thursday.
Please Wait while comments are loading...