ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು, 12 ಮಂದಿ ರಕ್ಷಣೆ

|
Google Oneindia Kannada News

ಮುಂಬೈ, ಜೂನ್ 28: ಮುಂಬೈನ ಕುರ್ಲಾದಲ್ಲಿ ಸೋಮವಾರ ರಾತ್ರಿ 11.30ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. 30 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಶೇಷಗಳಿಂದ 12 ಜನರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಬೃಹತ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಘಾಟ್‌ಕೋಪರ್‌ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ಕರೆತಂದವರ ಪೈಕಿ, ಓರ್ವ ವ್ತಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಸೋಮವಾರ ರಾತ್ರಿ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ತಂಡದಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಅವಲೋಕನ ನಡೆಸಿದರು.

Building Collapses In Mumbai: One Dead, 11 Injured

"ಬಿಎಂಸಿ ನೊಟೀಸ್ ನೀಡಿದಾಗ ತಾವಾಗಿಯೇ ಇಂತಹ ಕಟ್ಟಡಗಳಿಂದ ತೆರವುಗೊಳ್ಳಬೇಕು. ಇಲ್ಲದಿದ್ದರೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ, ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವುದು ಮುಖ್ಯ" ಎಂದು ಸಚಿವ ಆದಿತ್ಯ ಠಾಕ್ರೆ ತಿಳಿಸಿದ್ದಾರೆ.

"ಎಲ್ಲಾ ನಾಲ್ಕು ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ, ಆದರೆ ಜನರು ಅಲ್ಲಿ ವಾಸಿಸುತ್ತಿದ್ದಾರೆ. ಎಲ್ಲರನ್ನೂ ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ, ಈ ಕಟ್ಟಡಗಳ ತೆರವುಗೊಳಿಸುವುದು ಮತ್ತು ನೆಲಸಮ ಮಾಡುವುದರ ಬಗ್ಗೆ ಪರಿಶೀಲನೆ ನಡೆಸುತ್ತೇವೆ, ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುವುದಿಲ್ಲ" ಎಂದು ಅವರು ತಿಳಿಸಿದ್ದಾರೆ.

Building Collapses In Mumbai: One Dead, 11 Injured

ಕಟ್ಟಡ ತೆರವು ಮಾಡಲು ನೊಟೀಸ್ ನೀಡಿದ್ದ ಬಿಎಂಸಿ

ಸ್ಥಳೀಯ ಮಾಜಿ ಕಾರ್ಪೊರೇಟರ್ ಪ್ರವೀಣ ಮೊರಜಕರ್ ಮಾತನಾಡಿ, "ಕಟ್ಟಡದ ನಿವಾಸಿಗಳು ಮತ್ತು ಇತರ ಮೂವರಿಗೆ ಕಟ್ಟಡವನ್ನು ತೆರವು ಮಾಡುವಂತೆ ನೋಟಿಸ್ ನೀಡಲಾಗಿತ್ತು, ಆದರೆ ಬಾಡಿಗೆಯಲ್ಲಿದ್ದವರು ಇದಕ್ಕೆ ಅವಕಾಶ ನೀಡಿರಲಿಲ್ಲ. ಕಟ್ಟಡದ ಮಾಲೀಕರು ಯಾರು ಎಂದು ಇನ್ನೂ ತಿಳಿದಿಲ್ಲ," ಎಂದು ಅವರು ಹೇಳಿದರು.

"ಕಟ್ಟಡದಲ್ಲಿ ಸುಮಾರು 21 ಮಂದಿ ಇದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಬದಿ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಸಂಪರ್ಕಿತ ರೆಕ್ಕೆ ಕುಸಿಯುವ ಸಾಧ್ಯತೆಯಿದೆ," ಎಂದು ಹೇಳಿದರು.

ಎರಡು ರಕ್ಷಣಾ ವ್ಯಾನ್‌ಗಳು ಮತ್ತು ಇತರ ಅಗ್ನಿಶಾಮಕ ದಳದ ಉಪಕರಣಗಳೊಂದಿಗೆ ಹನ್ನೆರಡು ಅಗ್ನಿಶಾಮಕ ಎಂಜಿನ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

English summary
One Dead and 11 Injured In Four Strey building collapses in Mumbai. 20-22 people feared trapped, Rescue operation going on. Minister Thackeray visited the site.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X