ಬುಲೆಟ್ ರೈಲು: ಯೋಜನೆ ಮರುಪರಿಶೀಲಿಸಲು ಮುಂದಾದ 'ಮಹಾ' ಸಿಎಂ
ಮುಂಬೈ, ಡಿಸೆಂಬರ್ 02: ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್-ಎನ್ಸಿಪಿ ಮೈತ್ರಿ ಪಕ್ಷಗಳು ಸರ್ಕಾರ ರಚಿಸುತ್ತಿದ್ದಂತೆಯೇ, ದ್ವೇಷ ಹಾಗೂ ಸೇಡಿನ ರಾಜಕಾರಣ ಮಾಡಲು ಮುಂದಾಗಿವೆ ಎಂದು ಕಾಣಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಅಹಮದಾಬಾದ್ ಮತ್ತು ಮುಂಬೈ ನಡುವಿನ ಬುಲೆಟ್ ರೈಲು ಯೋಜನೆಯನ್ನು ಮರುಪರಿಶೀಲಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಮುಂದಾಗಿದೆ.
ಮುಂಬೈ ಟು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆ ಸೇರಿದಂತೆ ಅನೇಕ ಪ್ರಗತಿಯಲ್ಲಿರುವ ಅಭಿವೃದ್ದಿ ಯೋಜನೆಗಳನ್ನು ಮರುಪರಿಶೀಲನೆ ಮಾಡಲು ಉದ್ಧವ್ ಠಾಕ್ರೆ ಆದೇಶಿಸಿದ್ದಾರೆ.

ಖುದ್ದು ಉದ್ಧವ್ ಠಾಕ್ರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬುಲೆಟ್ ರೈಲು ಯೋಜನೆಗೆ ರೈತರು ಮತ್ತು ಬುಡಕಟ್ಟು ಜನಾಂಗ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಯೋಜನೆಯನ್ನು ಮರುಪರಿಶೀಲನೆ ಮಾಡಲು ಆದೇಶ ನೀಡಿರುವುದಾಗಿ ಹೇಳಿದ್ದಾರೆ.
ನಮ್ಮ ಸರ್ಕಾರ ಜನ ಸಾಮಾನ್ಯರ ಪರವಾಗಿದ್ದು, ಜನರ ಹಿತ ಕಾಯಲು ಬುಲೆಟ್ ರೈಲು ಯೋಜನೆ ಮರುಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಹಣಕಾಸು ಸ್ಥಿತಿಗತಿ ಬಗ್ಗೆ ಶೀಘ್ರವೇ ಶ್ವೇತ ಪತ್ರ ಹೊರಡಿಸುವುದಾಗಿ ಸಿಎಂ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications