ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಲೆಟ್ ರೈಲು: ಯೋಜನೆ ಮರುಪರಿಶೀಲಿಸಲು ಮುಂದಾದ 'ಮಹಾ' ಸಿಎಂ

|
Google Oneindia Kannada News

ಮುಂಬೈ, ಡಿಸೆಂಬರ್ 02: ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್-ಎನ್ಸಿಪಿ ಮೈತ್ರಿ ಪಕ್ಷಗಳು ಸರ್ಕಾರ ರಚಿಸುತ್ತಿದ್ದಂತೆಯೇ, ದ್ವೇಷ ಹಾಗೂ ಸೇಡಿನ ರಾಜಕಾರಣ ಮಾಡಲು ಮುಂದಾಗಿವೆ ಎಂದು ಕಾಣಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಅಹಮದಾಬಾದ್ ಮತ್ತು ಮುಂಬೈ ನಡುವಿನ ಬುಲೆಟ್ ರೈಲು ಯೋಜನೆಯನ್ನು ಮರುಪರಿಶೀಲಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಮುಂದಾಗಿದೆ.

ಇಲ್ಲಿ ಮಾತಾಡುವುದಲ್ಲ, ಬನ್ನಿ ಪ್ರಧಾನಿ ಮೋದಿ ಬಳಿ ಹೋಗೋಣ!ಇಲ್ಲಿ ಮಾತಾಡುವುದಲ್ಲ, ಬನ್ನಿ ಪ್ರಧಾನಿ ಮೋದಿ ಬಳಿ ಹೋಗೋಣ!

ಮುಂಬೈ ಟು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆ ಸೇರಿದಂತೆ ಅನೇಕ ಪ್ರಗತಿಯಲ್ಲಿರುವ ಅಭಿವೃದ್ದಿ ಯೋಜನೆಗಳನ್ನು ಮರುಪರಿಶೀಲನೆ ಮಾಡಲು ಉದ್ಧವ್ ಠಾಕ್ರೆ ಆದೇಶಿಸಿದ್ದಾರೆ.

Bullet Train:Maharashtra CM to reconsider project

ಖುದ್ದು ಉದ್ಧವ್ ಠಾಕ್ರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬುಲೆಟ್ ರೈಲು ಯೋಜನೆಗೆ ರೈತರು ಮತ್ತು ಬುಡಕಟ್ಟು ಜನಾಂಗ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಯೋಜನೆಯನ್ನು ಮರುಪರಿಶೀಲನೆ ಮಾಡಲು ಆದೇಶ ನೀಡಿರುವುದಾಗಿ ಹೇಳಿದ್ದಾರೆ.

ಮುಂಬೈನಲ್ಲಿ ಮರಗಳಿಗಲ್ಲ 'ಮೆಟ್ರೋ ಕಾರ್ ಶೆಡ್' ಕಾಮಗಾರಿಗೆ ಕತ್ತರಿ! ಮುಂಬೈನಲ್ಲಿ ಮರಗಳಿಗಲ್ಲ 'ಮೆಟ್ರೋ ಕಾರ್ ಶೆಡ್' ಕಾಮಗಾರಿಗೆ ಕತ್ತರಿ!

ನಮ್ಮ ಸರ್ಕಾರ ಜನ ಸಾಮಾನ್ಯರ ಪರವಾಗಿದ್ದು, ಜನರ ಹಿತ ಕಾಯಲು ಬುಲೆಟ್ ರೈಲು ಯೋಜನೆ ಮರುಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಹಣಕಾಸು ಸ್ಥಿತಿಗತಿ ಬಗ್ಗೆ ಶೀಘ್ರವೇ ಶ್ವೇತ ಪತ್ರ ಹೊರಡಿಸುವುದಾಗಿ ಸಿಎಂ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

English summary
In Maharashtra, The Shiv Sena,Congress,NCP Alliance Appears To Be Poised To Politicize Hatred And Revenge, Just As The Government Is Forming. Maharashtra Chief Minister Uddhav Thackeray Led Government Has Come Forward To Reconsider The Bullet Train Project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X