ಪ್ರಧಾನಿ ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆಗೆ ಹಿನ್ನಡೆ: ಭೂಮಿ ಹಸ್ತಾಂತರಿಸಲು ಥಾಣೆ ಮಹಾನಗರ ಪಾಲಿಕೆ ನಕಾರ
ಮುಂಬೈ, ಡಿಸೆಂಬರ್ 25: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಅಹಮದಾಬಾದ್-ಮುಂಬೈ ನಡುವಿನ ಬುಲೆಟ್ ಟ್ರೈನ್ ಯೋಜನೆಗೆ ಕೊಂಚ ಹಿನ್ನಡೆಯಾಗಿದೆ. ಶಿವಸೇನೆ ನೇತೃತ್ವದ ಥಾಣೆ ಮಹಾನಗರಪಾಲಿಕೆಯು ಭೂಮಿಯನ್ನು ಹಸ್ತಾಂತರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದೆ.
ಕಾಂಜುರ್ಮಾರ್ಗ್ನಲ್ಲಿ ಮುಂಬೈ ಮೆಟ್ರೋ ಯೋಜನೆಗೆ ಭೂಮಿ ಹಂಚಿಕೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಮತ್ತು ಶಿವಸೇನಾ ನೇತೃತ್ವದ ಮಹಾರಾಷ್ಟ್ರ ನಡುವಿನ ವಿವಾದದ ನಡುವೆ ಈ ನಿರ್ಧಾರ ಹೊರಬಿದ್ದಿದೆ.
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯನ್ನು ಕಾರ್ಯಗತಗೊಳಿಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿ) 3,800 ಚದರ ಮೀಟರ್ ಭೂಮಿಯನ್ನು ನೀಡುವಂತೆ ಥಾಣೆ ಮಹಾನಗರಪಾಲಿಗೆ ಕೇಳಿಕೊಂಡಿತ್ತು. ಆದರೆ ಬುಧವಾರ ಟಿಎಂಸಿಯ ಸಾಮಾನ್ಯ ಸಂಸ್ಥೆಯ ಸಭೆಯಲ್ಲಿ ತಿರಸ್ಕರಿಸಿದೆ ಎಂದು ಹೇಳಲಾಗಿದೆ.

ಎನ್ಎಚ್ಎಸ್ಆರ್ಸಿ ಟಿಎಂಸಿಗೆ 6 ಕೋಟಿ ರೂ.ಗಳ ಪರಿಹಾರಕ್ಕಾಗಿ ಭೂಮಿಯನ್ನು ಹಸ್ತಾಂತರಿಸುವಂತೆ ಕೋರಿತ್ತು. ಈ ಸಂಬಂಧ ಪ್ರಸ್ತಾವನೆ ಬುಧವಾರ ಐದನೇ ಬಾರಿಗೆ ಸಾಮಾನ್ಯ ಮಂಡಳಿಯ ಮುಂದೆ ಬಂದು ತಿರಸ್ಕರಿಸಲ್ಪಟ್ಟಿತು.
ಮುಂಬೈ ಮೆಟ್ರೊಗೆ ಕಾರ್ ಶೆಡ್ ಇರುವ ಸ್ಥಳವನ್ನು ಪೂರ್ವ ಮುಂಬಯಿಯ ಕಾಂಜುರ್ಮಾರ್ಗ್ಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಆದರೆ ಕೇಂದ್ರ ಸರ್ಕಾರವು ಭೂಮಿ ತನ್ನ ಇಲಾಖೆಗೆ ಸೇರಿದೆ ಎಂದು ಹೈಕೋರ್ಟ್ಗೆ ಮೊರೆ ಹೋಗಿದ್ದು, ಭೂಮಿ ಹಂಚಿಕೆಯನ್ನು ಹೈಕೋರ್ಟ್ ತಡೆಹಿಡಿದಿದೆ.
-
Vande Bharat Express: ದೇಶದಲ್ಲಿ ವಂದೇ ಭಾರತ್ ರೈಲಿನ ಹವಾ: ಪ್ರಯಾಣಿಕರ ಸಂಖ್ಯೆ ಶೇ.34ರಷ್ಟು ಏರಿಕೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications