ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಎ ಕುರಿತು ಜಾಗೃತಿ: ಶಾಲೆಗೆ ನೋಟಿಸ್ ನೀಡಿದ 'ಮಹಾ' ಸರ್ಕಾರ

|
Google Oneindia Kannada News

ಮುಂಬೈ, ಜನವರಿ.13: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಮಹಾರಾಷ್ಟ್ರದಲ್ಲಿ ಸರ್ಕಾರವೇ ಶಾಲಾ ಆಡಳಿತ ಮಂಡಳಿಗೆ ನೋಟಿಸ್ ಜಾರಿಗೊಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಕಿಡಿ ಕಾರಿದ್ದಾರೆ.

ಪೌರತ್ವ ತಿದ್ದುಪಡಿಗೆ ಕೇಂದ್ರ ಸಂಸತ್ ನಲ್ಲಿ ಅನುಮೋದನೆ ದೊರೆತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಂಕಿತ ಸಿಕ್ಕಿದ್ದು ಕಾಯ್ದೆಯಾಗಿ ಮಾರ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವುದು ತಪ್ಪೇ ಎಂದು ಪ್ರಶ್ನೆ ಮಾಡಿದ್ದಾರೆ.

CAA: Maharashtra Government Notice To A School in Mumbai

ಪೌರತ್ವ ತಿದ್ದುಪಡಿ ಕಾಯ್ದೆ: ಪ್ರಧಾನಿಗೆ ಪಿ.ಚಿದಂಬರಂ ಡಿಫರೆಂಟ್ ಸಲಹೆಪೌರತ್ವ ತಿದ್ದುಪಡಿ ಕಾಯ್ದೆ: ಪ್ರಧಾನಿಗೆ ಪಿ.ಚಿದಂಬರಂ ಡಿಫರೆಂಟ್ ಸಲಹೆ

ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿರುವ ದಯಾನಂದ ಶಾಲೆಯಲ್ಲಿ ಮಕ್ಕಳಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ. ಹೀಗಾಗಿ ಸರ್ಕಾರದ ಶಾಲಾ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ ಎಂದು ಹೇಳಲಾಗುತ್ತಿದೆ.

'ಮಹಾ' ಸರ್ಕಾರದ ನಡೆಗೆ ಖಂಡನೆ:

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿ ಕೇಂದ್ರ ಸಚಿವಾಲಯವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿ ಆಗಿದೆ. ಸಿಎಎಯನ್ನು ಅನುಷ್ಠಾನಗೊಳಿಸಲು ಎಲ್ಲೆಡೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆದರೆ, ಮಹಾರಾಷ್ಟ್ರ ಸರ್ಕಾರದ ನಡೆ ಸಂಪೂರ್ಣ ವಿರುದ್ಧವಾಗಿದೆ ಎಂದು ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ವಾಗ್ದಾಳಿ ನಡೆಸಿದ್ದಾರೆ.

English summary
Citizenship Amendment Act: Maharashtra Government Notice To A School in Mumbai For Organising An Awareness Programme On CAA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X