ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರ್ಕಾರದ ಕೆಳಗೆ ಸಿಬಿಐ ಪಾನ್ ಅಂಗಡಿಯಂತಾಗಿದೆ: ಸಚಿವ ಅಸ್ಲಂ

|
Google Oneindia Kannada News

ಮುಂಬೈ, ನವೆಂಬರ್ 20: ಬಿಜೆಪಿ ಸರ್ಕಾರದ ಕೆಳಗೆ ಸಿಬಿಐ ಪಾನ್ ಅಂಗಡಿಯಂತಾಗಿದೆ ಎಂದು ಮಹಾರಾಷ್ಟ್ರ ಸಚಿವ ಅಸ್ಲಂ ಶೇಖ್ ಟೀಕಿಸಿದ್ದಾರೆ.

ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಿಐ ಪಾನ್ ಪಟ್ಟಿ ಕಿ ದುಕಾನ್ ಆಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಸಿಬಿಐಗೆ 'ಗೇಟ್‌ಪಾಸ್' ನೀಡಿದ 9ನೇ ರಾಜ್ಯ ಪಂಜಾಬ್ಸಿಬಿಐಗೆ 'ಗೇಟ್‌ಪಾಸ್' ನೀಡಿದ 9ನೇ ರಾಜ್ಯ ಪಂಜಾಬ್

ಬಿಜೆಪಿಯೇತರ ಸರ್ಕಾರ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಮತ್ತು ಸಚಿವರುಗಳ ವಿರುದ್ಧ ಕೇಸ್ ದಾಖಲಿಸಲಾಗುತ್ತಿದೆ ಎಂದು ಶೇಖ್ ಆರೋಪಿಸಿದ್ದಾರೆ.ರಾಜ್ಯ ಸರ್ಕಾರಗಳ ಅನುಮತಿ ಪಡೆಯದೆ ಸಿಬಿಐ ತನಿಖೆ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿದೆ.

CBI Has Become Like A Pan Shop Under BJP Govt: Maharashtra Minister

ಅಲಹಬಾದ್‌ನ ಫರ್ಟಿಕೋ ಮಾರ್ಕೆಟಿಂಗ್ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ರಾಜ್ಯ ಸರ್ಕಾರದ ಅನುಮತಿ ಇಲ್ಲದೆಯೇ ಸಿಬಿಐ ದಾಳಿ ನಡೆಸಿದ್ದನ್ನು ಪ್ರಶ್ನಿಸಲಾಗಿತ್ತು.

ಸಿಬಿಐ ಕ್ರಮ ಸರಿ ಅಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್ ಯಾವುದೇ ಪ್ರಕರಣಗಳಲ್ಲಿ ಆಯಾ ರಾಜ್ಯ ಸರ್ಕಾರದ ಅನುಮತಿ ಇಲ್ಲದೇ ಸಿಬಿಐ ತನಿಖೆಗೆ ವಹಿಸುವಂತಿಲ್ಲ ಎಂದು ಹೇಳಿದೆ.

English summary
Welcoming the Supreme Court’s ruling that a state government’s consent is mandatory for a CBI investigation in its jurisdiction, Maharashtra minister Aslam Shaikh said that the central agency has become like a ‘pan shop’ under BJP govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X